ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ

12:26 PM Nov 06, 2024 IST | Samyukta Karnataka

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಆರೋಪಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು
2013-18

☠️ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ

☠️ಕೋಲಾರ ಡಿಸಿ ಡಿ.ಕೆ.ರವಿ ಆತ್ಮಹತ್ಯೆ

☠️ಕಲ್ಬುರ್ಗಿಯ ದಕ್ಷ ಪೊಲೀಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಹತ್ಯೆ

☠️ಅನ್ನಭಾಗ್ಯ ಹಗರಣದ ಸಾಕ್ಷ್ಯ ಸಂಗ್ರಹಿಸಿದ್ದ ಐ.ಎ.ಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವು.

☠️ಹೂವಿನ ಹಡಗಲಿಯ ಡಿ.ವೈ.ಎಸ್.ಪಿ ಯಾಗಿದ್ದ ಅನುಪಮಾ ಶೆಣೈಗೆ ಕಿರುಕುಳ, ನೌಕರಿಗೆ ರಾಜೀನಾಮೆ

☠️ಮೈಸೂರಿನ ಜಿಲ್ಲಾಧಿಕಾರಿ ಶಿಖಾ ಅವರಿಗೆ ಸಿಎಂ ಆಪ್ತರಿಂದ ಕಿರುಕುಳ

☠️ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ
ಮಹಾನಿರ್ದೇಶಕಿಯಾಗಿದ್ದ ರಶ್ಮಿಯವರ ಮೇಲೆ ಹಾಡುಹಗಲೇ ಮಾರಣಾಂತಿಕ ಹಲ್ಲೆ

2023-

☠️ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ

☠️ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ

☠️ ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವು.

☠️ ಸಚಿವರ ಆಪ್ತರ ಕಿರುಕುಳದಿಂದ ಬೆಳಗಾವಿಯ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ

ಸಿಎಂ ಸಿದ್ದರಾಮಯ್ಯನವರೇ, ತಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಪ್ರಾಮಾಣಿಕ ಅಧಿಕಾರಿಗಳ ಬಲಿ ಆಗಬೇಕು? ಎಂದು ಪ್ರಶ್ನಿಸಿದ್ದಾರೆ.

Tags :
#Rashoka#ಬೆಂಗಳೂರು#ಸಿದ್ದರಾಮಯ್ಯ
Next Article