ಪ್ರಾಯೋಜಿತ ವದಂತಿಗಳ ಮೇಲೆ ವಿಶ್ವಾಸ ಬೇಡ: ಯಾರಿಗೂ ನೋಟಿಸ್ ನೀಡಿಲ್ಲ
11:36 AM Jan 17, 2025 IST
|
Samyukta Karnataka
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಲ್ಲಗಳೆದಿದ್ದಾರೆ.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿ ಯಾವ ಸಚಿವರಿಗೂ, ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು ಈ ರೀತಿ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಯಾವ ಸಚಿವರಿಗೂ ಯಾವ ನಾಯಕರಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದರು. ಈ ವದಂತಿಗಳನ್ನೆಲ್ಲ ಯಾರು ಹಬ್ಬಿಸುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇನ್ನೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ, ಅಧ್ಯಕ್ಷರ ಬದಲಾವಣೆ ಆಗುತ್ತಿದ್ರೆ ಇಲ್ಲೇಕೆ ಬರುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.
Next Article