ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಖರ್ಗೆ ಹೊರಕ್ಕೆ: ದಲಿತರಿಗೆ ಮಾಡಿದ ಅವಮಾನ

11:48 AM Oct 24, 2024 IST | Samyukta Karnataka

ನವದೆಹಲಿ: ಕೇರಳದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಎಐಸಿಸಿ ಅಧ್ಯಕ್ಷರನ್ನೇ ಹೊರಗಟ್ಟಿತು ನಕಲಿ ಗಾಂಧಿ ಕುಟುಂಬ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು , ವಯನಾಡಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿರುವ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಹೈ ಕಮಾಂಡ್ ಮಲ್ಲಿಕಾರ್ಜುನ್ ಖರ್ಗೆ ಅವರನ್ನೇ ಹೊರಗೆ ಕಳಿಸುವ ಮೂಲಕ ತಮ್ಮ ನಡೆ ಏನೆಂಬುದನ್ನು ತೋರ್ಪಡಿಸಿದೆ ಎಂದು ಜೋಶಿ ಲೇವಡಿ ಮಾಡಿದ್ದಾರೆ.

ದಲಿತ ನಾಯಕನಿಗೆ ಅವಮಾನ ಆದ್ರೂ ಸಹನೆ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ನಿಷ್ಠಾವಂತ, ಹಿರಿಯ ದಲಿತ ನಾಯಕನಿಗೆ ಅವಮಾನ ಮಾಡಿದರೂ ಸಹನೆಯೇ? ಎಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ.

ನಕಲಿ ಗಾಂಧಿ ಕುಟುಂಬದ ಜೊತೆ ಬೆರೆಯಬೇಕೆಂದರೆ ಸ್ವತಃ ಕಾಂಗ್ರೆಸ್ ಅಧ್ಯಕ್ಷರೇ ಕ್ಯೂನಲ್ಲಿ ನಿಲ್ಲಬೇಕು. ಇದು ಇಂದಿನ ಗಾಂಧಿಯೇತರ ಕಾಂಗ್ರೆಸ್ಸಿಗರ ಸ್ಥಿತಿ ಎಂದು ಹೇಳಿದ್ದಾರೆ.

ಪಕ್ಷದ ಹಿರಿಯ ನಾಯಕ ಖರ್ಗೆ ಅವರನ್ನು ಕಾಂಗ್ರೆಸ್ ನ ನಕಲಿ ಗಾಂಧಿ ಕುಟುಂಬ ಈ ರೀತಿ ನಡೆಸಿಕೊಳ್ಳಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

Tags :
#ಪ್ರಲ್ಹಾದಜೋಶಿ
Next Article