ಪ್ರೊಬೆಷನರಿ ಐಪಿಎಸ್ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು
ಹಾಸನ: ಪೊಲೀಸ್ ಬೊಲೆರೋ ಜೀಪ್ ಅಪಘಾತಕ್ಕೀಡಾಗಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಘಟನೆ ಪ್ರಕರಣ ಸಂಬಂಧ ಹಾಸನ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪ್ ಚಾಲಕ ಮಂಜೇಗೌಡ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಮಧ್ಯಪ್ರದೇಶದ ಜಬಲ್ಪುರ ಮೂಲದ ಕರ್ನಾಟಕದ ಸೇವೆಗೆ ಆಯ್ಕೆಯಾಗಿದ್ದ 2023ನೇ ಸಾಲಿನ ಐಪಿಎಸ್ ಅಧಿಕಾರಿ ರ್ಷವರ್ಧನ್, ಮೈಸೂರಿನ ಪೊಲೀಸ್ ತರಬೇತಿ ಕೇಂದ್ರದಲ್ಲಿ ತರಬೇತಿ ಪೂರ್ಣಗೊಳಿಸಿ, ಹಾಸನ ಜಿಲ್ಲಾ ಎಎಸ್ಪಿಯಾಗಿ ಸೋಮವಾರ ಕಾರ್ಯಭಾರ ವಹಿಸಿಕೊಳ್ಳಬೇಕಿತ್ತು. ಅವರನ್ನು ಹಾಸನದ ಡಿಎಆರ್. ಕಾನ್ಸ್ಟೇಬಲ್ ಮಂಜೇಗೌಡ ಮೈಸೂರಿ ನಿಂದ ಹಾಸನಕ್ಕೆ ಕರೆತರುತ್ತಿದ್ದಾಗ ಕಿತ್ತಾನೆ ಗಡಿಯಲ್ಲಿ ಬೊಲೆರೋ ಜೀಪ್ ಟೈರ್ ಸ್ಫೋಟಗೊಂಡು, ಪಲ್ಟಿಯಾಗಿದೆ. ಜೀಪ್ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಅವ ರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲ ಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹರ್ಷಬರ್ಧನ್ ನಿನ್ನೆಯಷ್ಟೇ ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಟ್ರೇನಿಂಗ್ ಮುಗಿಸಿದ್ದರು. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಇವತ್ತು ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಡಿವೈಎಸ್ಪಿಯಾಗಿ ಚಾರ್ಜ್ ತೆಗೆದುಕೊಳ್ಳಬೇಕಿತ್ತು. ಐಜಿಪಿ ಬೋರಲಿಂಗಯ್ಯ ರಿಪೋರ್ಟ್ ಮಾಡಿಕೊಂಡು ಹಾಸನಕ್ಕೆ ಜೀಪ್ನಲ್ಲಿ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಅನ್ನುವಷ್ಟರಲ್ಲಿ ದುರಂತ ಸಂಭವಿಸಿದೆ.
ಸಿಎಂ ಸಿದ್ದರಾಮಯ್ಯ ಸಂತಾಪ: ಹಾಸನ - ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ