ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಫಲ ಕರುಣಿಸುವ ಅಕ್ಷಯ ತೃತೀಯ

03:00 AM May 10, 2024 IST | Samyukta Karnataka

ಅಕ್ಷಯ ತೃತೀಯದಂದು ಇಡೀ ದಿನ ಶುಭ ಮುಹೂರ್ತವೇ ಆಗಿರುತ್ತದೆ, ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ. ಈ ದಿನದಂದು ಹಯಗ್ರೀವ ಅವತಾರ, ನರನಾರಾಯಣ ಪ್ರಕಟೀಕರಣ ಮತ್ತು ಪರಶುರಾಮನ ಅವತಾರವಾಗಿದೆ. ಈ ತಿಥಿಯಂದು ಬ್ರಹ್ಮ ಮತ್ತು ಶ್ರೀವಿಷ್ಣುವಿನ ಮಿಶ್ರ ಲಹರಿಗಳು ಉಚ್ಚ ದೇವತೆಗಳ ಲೋಕದಿಂದ ಪೃಥ್ವಿಯ ಮೇಲೆ ಬರುತ್ತವೆ. ಆದುದರಿಂದ ಪೃಥ್ವಿಯ ಮೇಲಿನ ಸಾತ್ವಿಕತೆಯು ಹೆಚ್ಚಾಗುತ್ತದೆ. ಈ ಕಾಲಮಹಾತ್ಮೆಯಿಂದಾಗಿ ಈ ತಿಥಿಯಂದು ಪವಿತ್ರ ಸ್ನಾನ, ದಾನಗಳಂತಹ ಧರ್ಮಕಾರ್ಯಗಳನ್ನು ಮಾಡಿದರೆ ಅವುಗಳಿಂದ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ. ಈ ತಿಥಿಯಂದು ದೇವತೆಗಳನ್ನು ಮತ್ತು ಪಿತೃಗಳನ್ನು ಉದ್ದೇಶಿಸಿ ಮಾಡಿದ ಎಲ್ಲ ಕರ್ಮಗಳೂ ಅಕ್ಷಯವಾಗುತ್ತವೆ. (ಆಧಾರ: ಮದನರತ್ನ') ಆಚರಿಸುವ ಪದ್ಧತಿ ಕಾಲವಿಭಾಗದ ಪ್ರಾರಂಭದ ದಿನವು ಭಾರತೀಯರಿಗೆ ಪವಿತ್ರವಾಗಿದೆ; ಆದುದರಿಂದ ಇಂತಹ ತಿಥಿಗಳಂದು ಸ್ನಾನದಾನಾದಿ ಧರ್ಮಕಾರ್ಯಗಳನ್ನು ಹೇಳಲಾಗಿದೆ. ಈ ದಿನದ ವಿಧಿಯೆಂದರೆ ಪವಿತ್ರ ನೀರಿನಲ್ಲಿ ಸ್ನಾನ, ಶ್ರೀವಿಷ್ಣುವಿನ ಪೂಜೆ, ಜಪ, ಹೋಮ, ದಾನ ಮತ್ತು ಪಿತೃತರ್ಪಣ. ಈ ದಿನ ಅಪಿಂಡಕ ಶ್ರಾದ್ಧವನ್ನು ಮಾಡಬೇಕು, ಅದು ಸಾಧ್ಯವಿಲ್ಲದಿದ್ದರೆ ಕಡಿಮೆಪಕ್ಷ ಎಳ್ಳಿನ ತರ್ಪಣವನ್ನಾದರೂ ಕೊಡಬೇಕು. ದಾನವುಸತ್ಪಾತ್ರೇ ದಾನ'ವಾಗಿರಬೇಕು. ಸಂತರಿಗೆ ಅಥವಾ ಸಮಾಜದಲ್ಲಿ ಧರ್ಮಪ್ರಸಾರವನ್ನು ಮಾಡುವ ಆಧ್ಯಾತ್ಮಿಕ ಸಂಸ್ಥೆಗಳಿಗೆ ಮಾಡಿದ ದಾನವು ಸತ್ಪಾತ್ರೇ ದಾನ'ವಾಗಿದೆ. ಸತ್ಪಾತ್ರೇ ದಾನವನ್ನು ಮಾಡುವುದರಿಂದ ದಾನದ ಕರ್ಮವು ಅಕರ್ಮಕರ್ಮವಾಗುತ್ತದೆ. ಅಕರ್ಮಕರ್ಮವೆಂದರೆ ಪಾಪ-ಪುಣ್ಯಗಳ ಲೆಕ್ಕಾಚಾರವು ತಗಲದಿರುವುದು. ಇದರಿಂದ ದಾನವನ್ನು ನೀಡುವವನು ಯಾವುದೇ ಬಂಧನದಲ್ಲಿ ಸಿಲುಕದೇ, ಅವನ ಆಧ್ಯಾತ್ಮಿಕ ಉನ್ನತಿಯಾಗಲು ಸಹಾಯವಾಗುತ್ತದೆ. ಎಳ್ಳು ತರ್ಪಣ ಏಕೆ ಮಾಡುತ್ತಾರೆ? ಪೂರ್ವಜರಿಗೆ ಗತಿ ಸಿಗುವುದು ಮಹತ್ವ: ಅಕ್ಷಯ ತದಿಗೆಯ ದಿನ ಉಚ್ಚಲೋಕದಿಂದ ಸಾತ್ವಿಕತೆಯು ಬರುತ್ತಿರುತ್ತದೆ. ಈ ಸಾತ್ವಿಕತೆಯನ್ನು ಗ್ರಹಣ ಮಾಡಲು ಭುವರ್ಲೋಕದಲ್ಲಿನ ಅನೇಕ ಜೀವಗಳು ಪೃಥ್ವಿಯ ಸಮೀಪಕ್ಕೆ ಬರುತ್ತವೆ. ಭುವರ್ಲೋಕದಲ್ಲಿರುವ ಬಹುತೇಕ ಜೀವಗಳು ಮನುಷ್ಯರ ಪೂರ್ವಜರಾಗಿರುತ್ತಾರೆ ಮತ್ತು ಅವರು ಪೃಥ್ವಿಯ ಸಮೀಪ ಬರುವುದರಿಂದ ಮನುಷ್ಯರಿಗೆ ತೊಂದರೆಯಾಗುವ ಸಾಧ್ಯತೆಯಿರುತ್ತದೆ. ಪೂರ್ವಜರ ಋಣವೂ ಮನುಷ್ಯರ ಮೇಲೆ ಬಹಳಷ್ಟು ಇರುತ್ತದೆ. ಈ ಋಣವನ್ನು ತೀರಿಸಲು ಮನುಷ್ಯನು ಪ್ರಯತ್ನ ಮಾಡುವುದು ಈಶ್ವರನಿಗೆ ಅಪೇಕ್ಷಿತವಾಗಿದೆ. ಪೂರ್ವಜರಿಗೆ ಗತಿ ಸಿಗಬೇಕೆಂದು ಅಕ್ಷಯ ತದಿಗೆಯ ದಿನ ಎಳ್ಳು ತರ್ಪಣವನ್ನು ಮಾಡುತ್ತಾರೆ. ಎಳ್ಳು ತರ್ಪಣ ಮಾಡುವ ಪದ್ಧತಿ ಒಂದು ತಟ್ಟೆಯನ್ನು ತೆಗೆದುಕೊಂಡು ತಟ್ಟೆಯಲ್ಲಿ ಶ್ರೀವಿಷ್ಣು, ಬ್ರಹ್ಮ ಅಥವಾ ದತ್ತನ ಆವಾಹನೆಯನ್ನು ಮಾಡಬೇಕು. ಆಮೇಲೆ ದೇವತೆಗಳು ಸೂಕ್ಷ್ಮದಲ್ಲಿ ಆ ತಟ್ಟೆಯಲ್ಲಿ ಬಂದಿದ್ದಾರೆಂದು ಭಾವವನ್ನಿಟ್ಟು ಕೈಯಲ್ಲಿ ಎಳ್ಳನ್ನು ತೆಗೆದುಕೊಂಡು ಅವರ ಚರಣಗಳ ಮೇಲೆ ಅರ್ಪಿಸಬೇಕು. ಇನ್ನೊಂದು ತಟ್ಟೆಯನ್ನು ತೆಗೆದುಕೊಂಡು ನಮ್ಮ ಪೂರ್ವಜರ ಆವಾಹನೆಯನ್ನು ಮಾಡಬೇಕು. ಆಮೇಲೆ ಪೂರ್ವಜರು ತಟ್ಟೆಯಲ್ಲಿ ಬಂದಿದ್ದಾರೆಂದು ಭಾವವನ್ನಿಟ್ಟು ದೇವತೆಗಳ ತತ್ತ್ವದಿಂದ ಭರಿತವಾದ ಎಳ್ಳನ್ನು ಅವರಿಗೆ ಅರ್ಪಿಸಬೇಕು, ಅಂದರೆ ಸಾತ್ತಿವಕವಾಗಿರುವ ಈ ಎಳ್ಳನ್ನು ಕೈಯಲ್ಲಿ ತೆಗೆದುಕೊಂಡು ಅದರ ಮೇಲಿನಿಂದ ತಟ್ಟೆಯಲ್ಲಿ ನಿಧಾನವಾಗಿ ನೀರನ್ನು ಬಿಡಬೇಕು ಮತ್ತು ಆ ಸಮಯದಲ್ಲಿ ಬ್ರಹ್ಮ, ಶ್ರೀವಿಷ್ಣು ಅಥವಾ ಇವರಿಬ್ಬರ ಅಂಶವಿರುವ ದತ್ತನಿಗೆ ಪೂರ್ವಜರಿಗೆ ಗತಿ ನೀಡಬೇಕೆಂದು ಪ್ರಾರ್ಥನೆಯನ್ನು ಮಾಡಬೇಕು. ಮೃತ್ತಿಕಾಪೂಜೆ, ಮಣ್ಣಿನಲ್ಲಿ ಹೊಂಡಗಳನ್ನು ಮಾಡುವುದು, ಬೀಜಗಳ ಬಿತ್ತನೆ ಮತ್ತು ಗಿಡಗಳನ್ನು ನೆಡುವುದು. ಯುಗಾದಿ'ಯ ಶುಭಮುಹೂರ್ತದಂದು ಊಳಿದ ಹೊಲದ ಸಾಗುವಳಿಯ ಕೆಲಸವನ್ನು ಅಕ್ಷಯ ತೃತೀಯದ ಒಳಗೆ ಪೂರ್ಣಗೊಳಿಸಬೇಕು. ಅಕ್ಷಯ ತೃತೀಯದಂದು ಸಾಗುವಳಿ ಮಾಡಿದ ಜಮೀನಿನಲ್ಲಿರುವ ಮಣ್ಣನ್ನು ಕೃತಜ್ಞತೆಯ ಭಾವದಿಂದ ಪೂಜಿಸಬೇಕು.
ಅನಂತರ ಪೂಜಿಸಿದ ಮಣ್ಣಿನಲ್ಲಿ ಹೊಂಡಗಳನ್ನು ಮಾಡಬೇಕು ಮತ್ತು ಆ ಹೊಂಡಗಳಲ್ಲಿ ಬೀಜಗಳನ್ನು ಬಿತ್ತಬೇಕು. ಅಕ್ಷಯ ತೃತೀಯದ ಮುಹೂರ್ತದಲ್ಲಿ ಬೀಜಗಳನ್ನು ಬಿತ್ತಲು ಪ್ರಾರಂಭಿಸಿದರೆ ಆ ದಿನ ವಾತಾವರಣದಲ್ಲಿ ಕಾರ್ಯನಿರತವಾಗಿರುವ ದೈವೀ ಶಕ್ತಿಯು ಬೀಜಗಳಲ್ಲಿ ಬರುವುದರಿಂದ ಸಮೃದ್ಧವಾದ ಫಸಲು ಬರುತ್ತದೆ. ಇದೇ ರೀತಿಯಲ್ಲಿ ಅಕ್ಷಯ ತೃತೀಯದಂದು ಹೊಂಡಗಳನ್ನು ಮಾಡಿ ಗಿಡಗಳನ್ನು ನೆಟ್ಟರೆ ಹಣ್ಣಿನ ತೋಟವೂ ಹೇರಳವಾದ ಉತ್ಪಾದನೆಯನ್ನು ನೀಡುತ್ತದೆ.

ದಾನ ಮಾಡುವುದರಿಂದ ಲಾಭ?
ದಾನ ಮಾಡುವುದರಿಂದ ಪುಣ್ಯವು ಸಿಗುತ್ತದೆ. ಅಕ್ಷಯ ತದಿಗೆಯ ದಿನ ಮಾಡಿದ ದಾನವು ಯಾವಾಗಲೂ ಕ್ಷಯವಾಗುವುದಿಲ್ಲ. ಅಕ್ಷಯ ತದಿಗೆಯ ದಿನ ಮಾಡಿದ ದಾನದಿಂದ ಬಹಳಷ್ಟು ಪುಣ್ಯ ಸಿಗುತ್ತದೆ.
ಬಹಳಷ್ಟು ಪುಣ್ಯವು ಲಭಿಸುವುದರಿಂದ ವ್ಯಕ್ತಿಯ ಪುಣ್ಯದ ಸಂಗ್ರಹವು ಹೆಚ್ಚಾಗುತ್ತದೆ. ಯಾವುದಾದರೊಂದು ಜೀವದ ಹಿಂದಿನ ಕರ್ಮಗಳು ಒಳ್ಳೆಯದಾಗಿದ್ದರೆ ಅವನ ಪುಣ್ಯದ ಸಂಗ್ರಹವು ಹೆಚ್ಚಾಗುತ್ತದೆ. ಇದರಿಂದ ಅವನಿಗೆ ಸ್ವರ್ಗಪ್ರಾಪ್ತಿಯಾಗಬಹುದು. ಎಲ್ಲಿ ಅಧ್ಯಾತ್ಮದ ಪ್ರಸಾರದ ಜೊತೆಗೆ ರಾಷ್ಟ್ರ ಮತ್ತು ಧರ್ಮಗಳಿಗಾಗಿ ಕಾರ್ಯ ಮಾಡಲಾಗುತ್ತದೆಯೋ, ಇಂತಹ ಸತ್‌ಕಾರ್ಯಗಳಿಗೆ ದಾನ ಮಾಡುವುದೆಂದರೆ ಸತ್ಪಾತ್ರೇ ದಾನ. ಸತ್ಪಾತ್ರರಿಗೆ ದಾನ ಮಾಡುವುದರಿಂದ ದಾನ ಮಾಡುವವನಿಗೆ ಪುಣ್ಯವು ಸಿಗದೆ ದಾನದ ಕರ್ಮವು ಅಕರ್ಮ ಕರ್ಮವಾಗುತ್ತದೆ.

ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವ
ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

Next Article