ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಫೆ. 10ರಂದು ಹುಬ್ಬಳ್ಳಿಗೆ ಅಮಿತ್ ಶಾ

11:12 PM Jan 25, 2024 IST | Samyukta Karnataka

ಹುಬ್ಬಳ್ಳಿ: ಅಖಿಲ ಭಾರತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ರಾಷ್ಟ್ರೀಯ ಅಧಿವೇಶನ ಫೆ.೯ ಮತ್ತು ೧೦ರಂದು ಅಮರಗೋಳದ ಎಪಿಎಂಸಿ ಎದುರು ಇರುವ ವಿದ್ಯಾಧಿರಾಜ ಭವನದಲ್ಲಿ ಏರ್ಪಡಿಸಲಾಗಿದೆ.
ಸಹಕಾರ ಭಾರತಿ ಕರ್ನಾಟಕದ ನೇತೃತ್ವದಲ್ಲಿ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ರಾಜಶೇಖರ ಶೀಲವಂತ ತಿಳಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.೧೦ ರಂದು ಮಧ್ಯಾಹ್ನ ೩ರ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ. ಅನೇಕ ಸಹಕಾರಿ ತಜ್ಞ ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಸಹಕಾರಿ ಕ್ಷೇತ್ರದ ಉತ್ಪನ್ನ ಹಾಗೂ ಮಾರಾಟ ಪ್ರದರ್ಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಹಕಾರ ಸಂಘಗಳ ಬೇಡಿಕೆ ಹಾಗೂ ಸಮಸ್ಯೆಗಳ ಕುರಿತು ಅಮಿತ್ ಶಾ ಅವರಿಗೆ ಮನವಿ ಸಲ್ಲಿಲಾಗುವುದು ಎಂದು ಹೇಳಿದರು.
ಎರಡು ದಿನಗಳ ಈ ಅಧಿವೇಶನದಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಸಹಕಾರ ಸಂಸ್ಥೆಗಳಲ್ಲಿ ಕಾರ್ಯ ಮಾಡುತ್ತಿರುವ ೭೦೦-೮೦೦ ಪ್ರತಿನಿಧಿಗಳು ಹಾಗೂ ರಾಜ್ಯದಲ್ಲಿ ೧೦೦೦ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಪ್ರಾಥಮಿಕ ಕೃಷಿ ಪತ್ತಿನ ಸಂಘದ ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಹೊರಕೇರಿ, ಸಹಕಾರಿ ಭಾರತೀಯ ಪ್ರಧಾನ ಕಾರ್ಯದರ್ಶಿ ಮೋಹನ ದಾಸ ನಾಯಕ, ಪ್ರಸನ್ನ ಕುಮಾರ ಇದ್ದರು.

Next Article