ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು

06:01 PM Oct 01, 2024 IST | Samyukta Karnataka

ಬೆಂಗಳೂರು: ಈ ಬಾರಿ ಅರ್ಥಪೂರ್ಣವಾದ-ವಾಲ್ಮೀಕಿ ಜಯಂತಿ ಆಚರಣೆ ನಡೆಸೋಣ. ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ "2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತ ಪೂರ್ವಭಾವಿ" ಸಭೆಯಲ್ಲಿ ಮಾತನಾಡಿದರು.
SCP/TSP ಕಾಯ್ದೆ ಮೊದಲಿಗೆ ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಗುತ್ತಿಗೆಯಲ್ಲಿ SC-STಗೆ ಮೀಸಲಾತಿ ಮೊದಲಿಗೆ ತಂದಿದ್ದು ಇಡೀ ದೇಶದಲ್ಲಿ ನಾವು ಮಾತ್ರ.‌
ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ ಎಂದು ಕಾಂಗ್ರೆಸ್ ಸರ್ಕಾರದ ಹಲವು ಪ್ರಥಮಗಳನ್ನು ವಿವರಿಸಿದರು.
2013-18ರ ವರೆಗೆ ನಾವು SCP/STP ಅನುದಾನ ನಿರಂತರವಾಗಿ ನಾವು ಹೆಚ್ಚಿಸಿದೆವು. ನಂತರ ಬಂದ ಸರ್ಕಾರ ಕೊಡಲೇ ಇಲ್ಲ. ನಾವು ಮತ್ತೆ ಅಧಿಕಾರಕ್ಕೆ ಬಂದು ಅನುದಾನ ಹೆಚ್ಚಿಸಿದೆವು. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.

Tags :
chief ministerreservationsiddaramaih
Next Article