ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬರೆದಿರುವ ಜಾಗಕ್ಕೆ ವೈಟ್‌ನರ್ ಹಾಕಿದವರು ಯಾರು..?

12:44 PM Aug 21, 2024 IST | Samyukta Karnataka

ಬೆಂಗಳೂರು: ಪತ್ರದಲ್ಲಿ ಯಾವ ಸ್ಥಳದಲ್ಲಿ ಎಂದು ಬರೆದಿರುವ ಜಾಗಕ್ಕೆ ವೈಟ್‌ನರ್ ಹಾಕಿದವರು ಯಾರು..? ಎಂದು ಜನತಾದಳ ಪ್ರಶ್ನೆಮಾಡಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಭ್ರಷ್ಟಾಚಾರದ "ಕೈ"ವಾಡಕ್ಕೆ ಮತ್ತಷ್ಟು ಸಾಕ್ಷಿಗಳನ್ನು ಮಾಧ್ಯಮಗಳೇ ಬೆತ್ತಲು ಮಾಡುತ್ತಿವೆ. ನಾವು ಇಂತಹ ಜಾಗದಲ್ಲೇ ನಿವೇಶನ ಕೊಡಿ ಎಂದು ಅರ್ಜಿ ಹಾಕಿರಲಿಲ್ಲ ಎಂದು ಸುಳ್ಳು ಸಮರ್ಥನೆ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರೇ ಈಗೇನು ಹೇಳುತ್ತೀರಿ..? ಇಂತಹದ್ದೇ ಜಾಗದಲ್ಲಿ ಸೈಟು ಕೊಡುವಂತೆ ನಿಮ್ಮ ಧರ್ಮಪತ್ನಿ ಪಾರ್ವತಿ ಅವರೇ ಮುಡಾ ಪ್ರಾಧಿಕಾರಕ್ಕೆ ಬರೆದಿರುವ ಪತ್ರವೇ ಪ್ರತ್ಯಕ್ಷ್ಯ ಸಾಕ್ಷಿಯಾಗಿ ನಿಂತಿದೆ. ಆ ಪತ್ರದಲ್ಲಿ ಯಾವ ಸ್ಥಳದಲ್ಲಿ ಎಂದು ಬರೆದಿರುವ ಜಾಗಕ್ಕೆ ವೈಟ್ ನರ್ ಹಾಕಿದವರು ಯಾರು..? ಇದು ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ನೀವು ನಿವೇಶನ ಕಬಳಿಸಲು ಹಾಗೂ ನಿಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಮಾಡಿರುವ ಷಡ್ಯಂತ್ರ ಅಲ್ಲವೇ ಸಿದ್ದರಾಮಯ್ಯನವರೇ..? ಮುಖ್ಯಮಂತ್ರಿಯಾಗಿ ಸ್ವಜನಪಕ್ಷಪಾತ, ಅಧಿಕಾರ ದುರ್ಬಳಕೆ, ಕಾನೂನಿನ ದುರುಪಯೋಗ ಮಾಡಿಕೊಂಡಿದ್ದೀರಿ..! ಸತ್ಯಹರಿಶ್ಚಂದ್ರ ಎಂದು ಬೆನ್ನುತಟ್ಟಿಕೊಳ್ಳುವ ನೀವು ಹಾಗೂ ನಿಮ್ಮ ಕರ್ನಾಟಕ ಕಾಂಗ್ರೆಸ್‌ ನಾಯಕರು ರಾಜ್ಯದ ಜನತೆಗೆ ಆ ಪತ್ರದ ಬಗ್ಗೆ ಉತ್ತರಿಸಿ..! ಮುಡಾದಲ್ಲಿ ಭ್ರಷ್ಟಾಚಾರ ಎಸಗಿರುವ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆ ಹುದ್ದೆಯ ಘನತೆಯನ್ನು ಕಾಪಾಡಿ ಎಂದಿದೆ.

Tags :
#Bjp#cmsiddaramaiah#JDS#MUDAScam#ಆರೋಗ್ಯಹಬ್ಬcongress
Next Article