For the best experience, open
https://m.samyuktakarnataka.in
on your mobile browser.

ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ

11:12 AM Mar 26, 2024 IST | Samyukta Karnataka
ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ

ಹುಬ್ಬಳ್ಳಿ: ಬರ ಪರಿಹಾರ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಜಿಎಸ್ ಟಿ ಹಣ ಬಾಕಿ ಉಳಿಸಿಕೊಂಡಿಲ್ಲ, ಎಸ್ ಡಿಆರ್'ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ ಅನುಕೂಲ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬರ ಪರಿಹಾರ, ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ ಎಂದರು.
ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಬಹಳಷ್ಟು ಕಡೆಗೆ ಕುಡಿಯುವ ನೀರಿಗೆ ತಾತ್ವಾರ ಇದೆ. ಆದರೂ ಸಹಿತ ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್'ಗೆ ಹೋಗಿದ್ದು ಖಂಡನೀಯ, ಇದು ದ್ವೇಷದ ರಾಜಕಾರಣ ಎಂದು ಹರಿಹಾಯ್ದರು.
ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪ್ಪಾಳಕ್ಕೆ ಹೊಡೆಯಿರಿ ಎಂದು ಹೇಳಿಕೆ ಕೊಟ್ಟಿರುವ ಸಚಿವ ಶಿವರಾಜ ತಂಗಡಗಿ ಹೇಳಿಕೆಯನ್ನು ಖಂಡಿಸಿದ ಪ್ರಲ್ಹಾದ್ ಜೋಶಿ, ದೇಶದಲ್ಲಿ ಶೇ.70-80 ರಷ್ಟು ಯುವಕರು ಮೋದಿ ಮೋದಿ ಎಂದು ಕೂಗುತ್ತಾರೆ. ರಾಗಾ ಅವರ ಕಾರ್ಯಕ್ರಮದಲ್ಲೂ ಸ್ವಯಂ ಪ್ರೇರಣೆಯಿಂದ ಮೋದಿ ಮೋದಿ ಎಂದು ಘೋಷಣೆ ಹಾಕುತ್ತಾರೆ. ಕಾಂಗ್ರೆಸ್'ನವರು ತಮ್ಮ ಕೈಯಲ್ಲಿ ಎಷ್ಟು ಶಕ್ತಿಯಿದೆ ಎಂದು ತೋರಿಸಲಿ.‌ ದೇಶದ ಜನ ಅವರಿಗೆ ಬುದ್ದಿ ಕಲಿಸತ್ತಾರೆ ಎಂದು ವಾಗ್ದಾಳಿ ನಡೆಸಿದರು.