For the best experience, open
https://m.samyuktakarnataka.in
on your mobile browser.

ಬಸ್ಸಿನಿಂದ ಎಸೆಯಲ್ಪಟ್ಟು ವಿದ್ಯಾರ್ಥಿ ಸಾವು

07:51 PM Aug 21, 2024 IST | Samyukta Karnataka
ಬಸ್ಸಿನಿಂದ ಎಸೆಯಲ್ಪಟ್ಟು ವಿದ್ಯಾರ್ಥಿ ಸಾವು

ಕಾರ್ಕಳ: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (೧೯) ಮೃತ ವಿದ್ಯಾರ್ಥಿ.

ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಜನಿತ್, ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಬಸ್ ಚಲಿಸುತ್ತಿದ್ದಾಗಲೇ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಮುಂದಿನ ಬಾಗಿಲಿನಿಂದ ರಸ್ತೆಗೆ ಬಿದ್ದ ಆತನ ಮೈಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದಿದ್ದು ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜನಿತ್ ಶೆಟ್ಟಿ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.

Tags :