For the best experience, open
https://m.samyuktakarnataka.in
on your mobile browser.

ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಐವನ್ ವಿವಾದಾತ್ಮಕ ಹೇಳಿಕೆ

05:09 PM Aug 19, 2024 IST | Samyukta Karnataka
ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು  ಐವನ್ ವಿವಾದಾತ್ಮಕ ಹೇಳಿಕೆ

ಮಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿರುವ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ವಿರುದ್ಧ ಖಂಡನೆ ವ್ಯಕ್ತಪಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ಮಹಾನಗರ ಪಾಲಿಕೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೆ ಬರಬಹುದು. ಕೇಂದ್ರ ಸರ್ಕಾರ ಕೂಡಲೇ ರಾಜ್ಯಪಾಲರನ್ನು ವಾಪಾಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಇಲ್ಲವಾದಲ್ಲಿ ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೆ ಬರಬಹುದು. ಕರ್ನಾಟಕದಲ್ಲಿಯೂ ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎಂದಿದ್ದಾರೆ.

ಪ್ರಕರಣ ದಾಖಲಿಸಬೇಕು: ಐವನ್ ಡಿಸೋಜಾ ಮಂಗಳೂರು ಪ್ರತಿಭಟನೆಯಲ್ಲಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಇದರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ಪೊಲೀಸರು ದಾಖಲಿಸಿಕೊಳ್ಳಬೇಕು. ಸಂವಿಧಾನ ವಿರೋಧಿ ಕೆಲಸವನ್ನ ಮಾಡಿದರೆ ತನಿಖೆ ಆಗಬೇಕು. ಮತ್ತೊಂದೆಡೆ ಆರೋಪ ಬಂದ ಮೇಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು.

ಕ್ಯಾ. ಬ್ರಿಜೇಶ್ ಚೌಟ, ಸಂಸದರು ದಕ್ಷಿಣ ಕನ್ನಡ

ವಿಎಚ್‌ಪಿ ಆಕ್ರೋಶ: ಐವನ್ ಡಿಸೋಜಾ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ. ಇದೊಂದು ದೇಶದ್ರೋಹದ ಹೇಳಿಕೆಯಾಗಿದೆ. ಇದು ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನವಾಗಿದ್ದು ಪೊಲೀಸ್ ಇಲಾಖೆ ತಕ್ಷಣ ಪ್ರಕರಣ ದಾಖಲಿಸಬೇಕು. ಈ ಹೇಳಿಕೆ ಬ್ರಿಟಿಷರ, ಮೊಗಲರ ಮನಸ್ಥಿತಿಯನ್ನು ತೋರಿಸುತ್ತಿದ್ದು, ರಾಜ್ಯದಲ್ಲಿ ದಂಗೆ ಎಬ್ಬಿಸುವ ಹುನ್ನಾರವಾಗಿದೆ, ರಾಜ್ಯದ ಜನಪ್ರತಿನಿಧಿಯಾಗಲು ಐವನ್ ಡಿ. ಸೋಜ ನಾಲಾಯಕ್.

ಶರಣ್ ಪಂಪ್‌ವೆಲ್, ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ

Tags :