ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿಗೆ ಯಾಕೆ ಗಾಬರಿ?

10:06 PM Dec 05, 2023 IST | Samyukta Karnataka

ಹುಬ್ಬಳ್ಳಿ: ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿ ಯಾಕೆ ಇಷ್ಟೊಂದು ಗಾಬರಿಯಾಗುತ್ತಿದೆ ಎಂದು ಆರೋಗ್ಯ ಖಾತೆ ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ ಆಕ್ಷೇಪ ಕುರಿತಂತೆ ಮಾಧ್ಯಮಗಳ ಮೂಲಕ ಪ್ರತಿಕ್ರಿಯಿಸಿದ ಗುಂಡೂರಾವ್ ಅವರು ಮುಖ್ಯಮಂತ್ರಿ ಅವರು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ರಾಜ್ಯದ ಜಿಲ್ಲಾ, ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳಿಗೆ ಔಷಧಿಗಳ ಪೂರೈಕೆ ಮಾಡುವ ಕರ್ನಾಟಕ ಔಷಧ ಸರಬರಾಜು ಸಂಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಔಷಧ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಆಸ್ಪತ್ರೆಗಳಿಗೆ ಅಗತ್ಯವಾಗಿ ಪೂರೈಕೆ ಮಾಡಬೇಕಾದ ಔಷಧಗಳು ಸೂಕ್ತವಾಗಿ ಸರಬರಾಜು ಆಗುತ್ತಿಲ್ಲ. ಪೂರೈಕೆ ಮಾಡುವ ಸಂಸ್ಥೆಯಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಎರಡು-ಮೂರು ತಿಂಗಳಲ್ಲಿ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

Next Article