ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿಯ ನಾಲ್ವರು ಪದಾಧಿಕಾರಿಗಳ ಉಚ್ಚಾಟನೆ

07:18 PM May 30, 2024 IST | Samyukta Karnataka

ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಬಂಡಾಯ ಅಭ್ಯರ್ಥಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ 48 ಗಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

Next Article