ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿ ಅವಧಿಯಲ್ಲಿ ರೈತರಿಗೆ ಕಳುಹಿಸಿದ ನೋಟೀಸುಗಳಿಗೆ ಉತ್ತರ ಕೊಡಲಿ…

11:25 AM Oct 29, 2024 IST | Samyukta Karnataka

ರಾಜ್ಯದ ಅಭಿವೃದ್ಧಿ ಬಿಟ್ಟು ಹಿಜಾಬ್, ಹಲಾಲ್, ಉರಿ ಗೌಡ, ನಂಜೇಗೌಡ ಎಂದು ಆಡಳಿತ ನಡೆಸಿದ ನಾಟಕ ಮಂಡಳಿಯ ಮುಂದುವರೆದ ಭಾಗ…

ಬೆಂಗಳೂರು: ಬಿಜೆಪಿಗೆ ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲೂ ರೈತರಿಗೆ ನೋಟಿಸ್​ ನೀಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್​ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬಿಜೆಪಿಗರ ನಕಲಿ ಹಿಂದೂ ಪ್ರೇಮದ ಮೊಸಳೆ ಕಣ್ಣೀರು ಬಟಾ ಬಯಲು! 2019ರಿಂದ 2022ರವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಆಪರೇಷನ್ ಕಮಲದ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟೀಸುಗಳಿವು! ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ? ರಾಜ್ಯದ ಅಭಿವೃದ್ಧಿ ಬಿಟ್ಟು ಹಿಜಾಬ್, ಹಲಾಲ್, ಉರಿ ಗೌಡ, ನಂಜೇಗೌಡ ಎಂದು ಆಡಳಿತ ನಡೆಸಿದ ನಾಟಕ ಮಂಡಳಿಯ ಮುಂದುವರೆದ ಭಾಗ ಈಗ ಪ್ರಸ್ತುತ ನಡೆಯುತ್ತಿರುವ ವಿದ್ಯಮಾನ. ಸುಳ್ಳು ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರೆಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ. ವಿಜಯೇಂದ್ರರವರ ಸತ್ಯಶೋಧನಾ ಸಮಿತಿ (ಅತ್ತು-ಗೋಗರೆದು ರಚನೆಗೊಂಡ ಪರಿಷ್ಕೃತ ಸತ್ಯಶೋಧನಾ ಸಮಿತಿ) ಅವರ ಸರ್ಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕಳುಹಿಸಿದ ನೋಟೀಸುಗಳಿಗೆ ಉತ್ತರ ಕೊಡಲಿ ಎಂದಿದ್ದಾರೆ.
ಇನ್ನೊಂದು ಪೋಸ್ಟ್‌ನಲ್ಲಿ ಬಿಜೆಪಿಯ ನಾಟಕ ಮಂಡಳಿಯಲ್ಲಿ ಭಿನ್ನಮತದ ಚಿತ್ತಾರ! ನಾ ಮುಂದು, ತಾ ಮುಂದು ಎಂದು ತಮ್ಮ ಪ್ರತಿಷ್ಠೆಯ ಅಸ್ತಿತ್ವಕ್ಕಾಗಿ ಸದಾ ಸುಳ್ಳಿನಕಂತೆ ಕಟ್ಟುವ, ಜನರ ಭಾವನೆಗಳೊಂದಿಗೆ ಆಟವಾಡುವ ಇವರು, ನಮ್ಮ ರೈತರಿಗೆ ಕಳುಹಿಸಿರುವ ನೋಟಿಸುಗಳಿಗೆ ಉತ್ತರಿಸಲಿ. ರಾಜ್ಯ ಬಿಜೆಪಿ ರಚಿಸಿರುವ ಸತ್ಯಶೋಧನಾ ಸಮಿತಿಯಲ್ಲಿ ಹಿರಿಯ ಸಂಸದ ರಮೇಶ್ ಜಿಗಜಿಣಗಿ ಹಾಗೂ ವಿಜಯಪುರದ ಶಾಸಕ ಬಸವನಗೌಡ ಪಾಟೀಲ ಯತ್ನಾಳರ ಹೆಸರು ನಿನ್ನೆಯವರೆವಿಗೂ ಇರಲಿಲ್ಲ. ಇಂದು ದಿಢೀರನೆ ಅವರ ಹೆಸರು ಸೇರ್ಪಡೆಯಾಗಿದೆ! ಹಿರಿಯ ನಾಯಕರೆಂದು ಬಿಜೆಪಿಯಲ್ಲಿ ಗುರುತಿಸಲಾಗಿರುವ ಈ ಇಬ್ಬರು ನಾಯಕರು ಅತ್ತೂ ಕರೆದು, ಈ ಕಮಿಟಿಯಲ್ಲಿ ಸೇರುವ ಸ್ಥಿತಿಗೆ ಬಂದು ತಲುಪಿರುವುದು ಬಿಜೆಪಿಯ ದುಃಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ! ಸಮಸ್ಯೆಯೇ ಇಲ್ಲದ ವಕ್ಫ್ ಕುರಿತು ಸುಳ್ಳು ಹುಟ್ಟುಹಾಕುತ್ತಿರುವ ಈ ನಾಯಕರು ತಮ್ಮ ಮಧ್ಯದಲ್ಲಿ ಸತ್ಯವಾಗಿರುವ ಸಮಸ್ಯೆಗಳನ್ನು ಮೊದಲು ಬಗೆ ಹರಿಸಿಕೊಳ್ಳಲಿ! ಬಿಜೆಪಿ ಅವಧಿಯಲ್ಲಿ ರೈತರಿಗೆ ಕಳುಹಿಸಿರುವ ಮತ್ತಷ್ಟು ನೋಟಿಸುಗಳು… ಸತ್ಯಶೋಧನಾ ಸಮಿತಿಯ ಉತ್ತರಕ್ಕಾಗಿ… ಎಂದು ಕೆಲ ದಾಖಲೆಗಳನ್ನು ಪೋಸ್ಟ್‌ ಮಾಡಿದ್ದಾರೆ.

Tags :
#ಎಂಬಿಪಾಟೀಲ್‌#ಕಾಂಗ್ರೆಸ್‌#ಬಸನಗೌಡಪಾಟೀಲಯತ್ನಾಳ#ಬಿಜೆಪಿ#ಯತ್ನಾಳ್‌#ವಿಜಯಪುರ#ವಿಜಯೇಂದ್ರ
Next Article