ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿ ಕೋಟೆ ಉಳಿಸಿಕೊಳ್ಳಲು ರಣವ್ಯೂಹ

10:57 PM Mar 05, 2024 IST | Samyukta Karnataka

ಬೆಳಗಾವಿ: ಲೋಕಸಭೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಆಕಾಂಕ್ಷಿಗಳು ಕಾತರದಿಂದ ಕಾಯುತ್ತಿರುವ ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕಿತ್ತೂರ ಕರ್ನಾಟಕದಲ್ಲಿ ಬಿಜೆಪಿ ವರ್ಚಸ್ಸು ಉಳಿಸಿಕೊಳ್ಳಲು ಇಂದು ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಮಿಂಚಿನ ಸಂಚಾರ ನಡೆಸಿ ಚುನಾವಣಾ ರಣವ್ಯೂಹ ರಚಿಸುವಲ್ಲಿ ಶ್ರಮಿಸಿದರು.
ಆದರೆ ಇವರೇ ಇದ್ದ ಸಭೆಗೆ ಗೈರಾಗುವ ಮೂಲಕ ರಮೇಶ ಜಾರಕಿಹೊಳಿ ಅವರು, ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶವನ್ನೂ ಇದೇ ಸಂದರ್ಭದಲ್ಲಿ ನೀಡಿದ್ದು ಪಕ್ಷದಲ್ಲಿ ಕೆಲ ವಲಯದಲ್ಲಿ ಆತಂಕಕ್ಕೂ ಕಾರಣವಾಯಿತು.
ಚಿಕ್ಕೋಡಿಯಲ್ಲಿ ಕಾರ್ಯಕರ್ತರ ಬಹಿರಂಗ ಸಮಾವೇಶ, ಬೆಳಗಾವಿಯಲ್ಲಿ ಪ್ರಬುದ್ಧರೊಂದಿಗೆ ಸಂವಾದ ನಡೆಸಿದ್ದಲ್ಲದೇ ಪಕ್ಷದ ಕೋರ್ ಸಮಿತಿ ಸಭೆಯನ್ನೂ ನಡ್ಡಾ ಅವರು ನಡೆಸಿ `ದೇಶಕ್ಕೆ ಮತ್ತೊಮ್ಮೆ ಮೋದಿ ಸರ್ಕಾರ' ಅವಶ್ಯವೆಂಬುದನ್ನು ಮನಗಾಣಿಸಲು ಬೂತ್ ವiಟ್ಟದಲ್ಲಿ ಕಾರ್ಯಕರ್ತರು ಮತದಾರರನ್ನು ಕಾಣಬೇಕೆಂದೂ ಸೂಚಿಸಿದರು.
ಅರ್ಧ ಗಂಟೆಯಲ್ಲಿ ಸಭೆ ಮೊಟಕು
ಅಧ್ಯಕ್ಷ ಜೆ.ಪಿ ನಡ್ಡಾ ಅವರ ನೇತೃತ್ವದಲ್ಲಿ ಬೆಳಗಾವಿ ಹೊರವಲಯದ ಜೊಲ್ಲೆ ಒಡೆತನದ ಹೋಟೆಲ್‌ನಲ್ಲಿ ಬೆಳಗಾವಿ ವಿಭಾಗೀಯ ಬಿಜೆಪಿ ಸಭೆ ನಡೆಯಿತು. ಆದರೆ ಕೇವಲ ಅರ್ಧ ಗಂಟೆಯಲ್ಲಿ ನಡ್ಡಾ ಸಭೆ ಮುಗಿಸಿ ಹೊರಟರು.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಮುಖಂಡರು, ಆಕಾಂಕ್ಷಿಗಳು, ಆಯ್ದ ಪದಾಧಿಕಾರಿಗಳು ಭಾಗಿಯಾಗಿದ್ದರು. ಪಕ್ಷದ ಸಂಘಟನೆ ಬಗ್ಗೆ ಮಾತ್ರ ಚರ್ಚೆಯಾಗಿದ್ದು ಅಭ್ಯರ್ಥಿ ಆಯ್ಕೆ, ಟಿಕೆಟ್ ವಿಚಾರದ ಕುರಿತು ಯಾವುದೇ ಚರ್ಚೆ ಆಗಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬೆಳಗಾವಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ರಮೇಶ ಜಿಗಜಿಣಗಿ ಅವರನ್ನೂ ಕಂಡು ಜೆ.ಪಿ. ನಡ್ಡಾ ಆರೋಗ್ಯ ವಿಚಾರಿಸಿದರು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಚುನಾವಣಾ ಉಸ್ತುವಾರಿ ರಾಧಾಮೋಹನದಾಸ ಅಗರವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಮಂಗಲ ಅಂಗಡಿ, ಪಿ.ಸಿ.ಗದ್ದಿಗೌಡರ, ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಬಸನಗೌಡ ಪಾಟೀಲ(ಯತ್ನಾಳ), ಬಾಲಚಂದ್ರ ಜಾರಕಿಹೊಳಿ, ಅರವಿಂದ್ ಬೆಲ್ಲದ, ಶಶಿಕಲಾ ಜೊಲ್ಲೆ, ಮಹೇಶ್ ಟೆಂಗಿನಕಾಯಿ, ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಚಿಕ್ಕೋಡಿ ಸಮಾವೇಶದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಇತರರು ಮತ್ತು ಬೆಳಗಾವಿ ಕೆ.ಎಲ್.ಇ ಸಂಸ್ಥೆಯ ಜೀರಗೆ ಸಭಾಭವನದಲ್ಲಿ ಆಯೋಜಿಸಿದ್ದ ಪ್ರಬುದ್ಧರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ, ಬಸನಗೌಡ ಪಾಟೀಲ ಯತ್ನಾಳ ಹಾಗೂ ಅನೇಕರು ಪಾಲ್ಗೊಂಡಿದ್ದರು.

Next Article