For the best experience, open
https://m.samyuktakarnataka.in
on your mobile browser.

ರಾಜೀನಾಮೆ ಕೊಡ್ತಾರಾ…?

11:33 AM Sep 28, 2024 IST | Samyukta Karnataka
ರಾಜೀನಾಮೆ ಕೊಡ್ತಾರಾ…

ಮೈಸೂರು: ನಿರ್ಮಲಾ ಸೀತಾರಾಮನ್ ಮೇಲೆ FIR ದಾಖಲಿಸುವಂತೆ ಆದೇಶ ಹೊರಬಿದ್ದಿದೆ. ಇವರ ರಾಜೀನಾಮೆಗೆ ಕರ್ನಾಟಕ ಬಿಜೆಪಿ ನಾಯಕರು ಯಾವಾಗ ಪ್ರತಿಭಟನೆ, ಪಾದಯಾತ್ರೆ ಮಾಡುತ್ತಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಅವರು ನಿನ್ನೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಆದೇಶ ಹೊರಬಿದ್ದಿದೆ. ಇವರ ರಾಜೀನಾಮೆಗೆ ಕರ್ನಾಟಕ ಬಿಜೆಪಿ ನಾಯಕರು ಯಾವಾಗ ಪ್ರತಿಭಟನೆ, ಪಾದಯಾತ್ರೆ ಮಾಡುತ್ತಾರೆ? ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ಅವರೂ ರಾಜೀನಾಮೆ ನೀಡಬೇಕಾಗುತ್ತದೆ. ಜಾಮೀನಿನ ಮೇಲಿರುವ ಹೆಚ್.ಡಿ. ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ ಎಂದರು.

ದಸರಾ ಉತ್ಸವ: ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿಯ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ನವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ದಸರಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿದ್ದಾರೆ. ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಎಚ್ಚರಿಕೆ ವಹಿಸಿದ್ದರೆ ಅನಾಹುತ ನಡೆಯುತ್ತಿರಲಿಲ್ಲ. ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಸೂಚಿಸಲಾಗಿದೆ ಎಂದರು.

Tags :