ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ SIT ದಾಳಿ
10:20 AM Sep 28, 2024 IST | Samyukta Karnataka
ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಎಸ್‌ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮುನಿರತ್ನ ಮನೆ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್‌ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಸದ್ಯ ಮೂರು ಕೇಸ್ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್ಎಸ್ಎಲ್ ತಂಡದ ಜತೆಗೇ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.