ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ SIT ದಾಳಿ

10:20 AM Sep 28, 2024 IST | Samyukta Karnataka

ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಎಸ್‌ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮುನಿರತ್ನ ಮನೆ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಸದ್ಯ ಮೂರು ಕೇಸ್​ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೇ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Tags :
#Bangalore#‌SIT#ಎಸ್‌ಐಟಿ#ಬೆಂಗಳೂರು#ಮುನಿರತ್ನ
Next Article