ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಿಜೆಪಿ ಸರ್ಕಾರಕ್ಕೆ ತಮ್ಮ ಶಾಸಕರನ್ನು ಕಳಿಸಿದ್ದೇ ಸಿದ್ದರಾಮಯ್ಯ

05:09 PM Nov 18, 2024 IST | Samyukta Karnataka

ಹುಬ್ಬಳ್ಳಿ: ಹಿಂದೆ ಬಿಜೆಪಿ ಸರ್ಕಾರ ರಚಿಸುವಾಗ ಸಿದ್ದರಾಮಯ್ಯ ಅವರೇ ತಮ್ಮ ಆಪ್ತ ಶಾಸಕರನ್ನು ಬಿಜೆಪಿಗೆ ಕಳಿಸಿದ್ದರು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಸಚಿವ ಪ್ರಲ್ಹಾದ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಜತೆ ಸರ್ಕಾರ ರಚನೆ ಇಷ್ಟವಿರಲಿಲ್ಲ. ಹಾಗಾಗಿ ತಾವೇ ಮುಂದೆ ನಿಂತು ಕೆಲ ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಕಳಿಸಿದ್ದರು. ಕಳೆದ ಬಾರಿ ಆಪರೇಷನ್ ಕಮಲ ನಡೆಸಲು ಕಾರಣ ರಾಜ್ಯದಲ್ಲಿ ಅತಂತ್ರ ಸ್ಥಿತಿಯತ್ತು. ಆದರೆ, ಈಗ ಪರಿಸ್ಥಿತಿ ಹಾಗಿಲ್ಲ. ಜನ ಕಾಂಗ್ರೆಸ್‌ಗೆ ಬಹುಮತದ ಅಧಿಕಾರ ಕೊಟ್ಟಿದ್ದಾರೆ. ಹಾಗಿದ್ದಾಗ ನಾವೇಕೆ ಮೂಗು ತೂರಿಸೋಣ? ಎಂದು ಹೇಳಿದರು.
ಬಾಯಿ ಮಾತಿನಲ್ಲಿ ಆರೋಪ ಮಾಡುವುದು ಸರಿಯಲ್ಲ. ಯಾವ ಬಿಜೆಪಿ ನಾಯಕರು ಯಾರಿಗೆ ಆಫರ್ ಕೊಟ್ಟಿದ್ದಾರೆ ಎಂಬುದನ್ನು ಸಾಕ್ಷಿ ಸಮೇತ ಸ್ಪಷ್ಟಪಡಿಸಲಿ. ೧೦೦ ಕೋಟಿ ಇರಲಿ, ೫೦೦ ಕೋಟಿ ಆಫರ್ ಇರಲಿ ದಾಖಲೆ ಇದ್ದರೆ ಬಿಡುಗಡೆ ಮಾಡಿ. ನಿಮ್ಮನ್ನು ಯಾರೂ ತಡೆಯುವುದಿಲ್ಲ. ಹಲವು ದಿನಗಳಿಂದ ಇದನ್ನೇ ಒತ್ತಿ ಒತ್ತಿ ಹೇಳುತ್ತಿರುವ ಕಾಂಗ್ರೆಸ್ ಶಾಸಕ ರವಿ ಗಾಣಿಗ ಇನ್ನೂ ಏಕೆ ದಾಖಲೆಗಳನ್ನು ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿದರು.

Tags :
bjpcongressprahlad joshisiddaramaih
Next Article