ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆಸ್ಪತ್ರೆಗೆ ದಾಖಲು
11:14 AM Dec 14, 2024 IST | Samyukta Karnataka
ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ಶನಿವಾರ) ಅವರನ್ನು ಇಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
97 ವರ್ಷದ ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದ್ದು, ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಡ್ವಾಣಿ ನಿಗಾದಲ್ಲಿಯೇ ಇದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ.ವಿನಿತ್ ಸೂರಿ ಅವರ ನೇತೃತ್ವದಲ್ಲಿ ದಾಖಲಾಗಿದ್ದಾರೆ. ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ಕರೆತರಲಾಗಿತ್ತು.