ಬಿರಿಯಾನಿ ತಿಂದು 17ಕ್ಕೂ ಹೆಚ್ಚು ಮಂದಿ ಅಸ್ವಸ್ಥ
12:12 PM Nov 21, 2023 IST | Samyukta Karnataka
ಚಿಕ್ಕಮಗಳೂರು : ಬಿರಿಯಾನಿ ತಿಂದು 17 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.
ಒಂದು ದಿನ ಹಿಂದೆ ಮಾಡಿದ್ದ ಬಿರಿಯಾನಿ ತಿಂದಿದ್ದ ಗ್ರಾಮಸ್ಥರು ಅಸ್ವಸ್ಥರಾಗಿದ್ದು, ಬಿರಿಯಾನಿ ಸೇವಿಸಿದವರಲ್ಲಿ 17 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ಮಾಡಲಾಗಿತ್ತು. ಆದರೆ, ಬಿರಿಯಾನಿಯನ್ನು ತಿಂದ ಕೂಡಲೇ ವಾಂತಿ ಭೇದಿಯಾಗಿದೆ.
ತಕ್ಷಣ ಅಸ್ವಸ್ಥ ಗೊಂಡವರನ್ನು ಕಡೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕ್ಕ ಪುಟ್ಟ ಮಕ್ಕಳು ಸೇರಿದಂತೆ 17 ಜನ ಅಸ್ವಸ್ಥಗೊಂಡು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ, ಇನ್ನೂ ವಿಷಯ ತಿಳಿಯುತ್ತಿದ್ದಂತೆ ಶಾಸಕ ಕೆ.ಎಸ್.ಆನಂದ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿ, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ