ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ: ದೂರು
ಮಂಗಳೂರು: ದ.ಕ. ದಲ್ಲಿ ಬಿಲ್ಲವ ಸಮಾಜದ ೧ ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿರುವ ಪಂಜ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂದು ಸಂಘಟನೆಗಳು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ದೂರು ನೀಡಿವೆ.
‘ಬಿಲ್ಲವ ಸಮಾಜದ ೧ ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು’ ಎಂದು ಹೇಳಿದ್ದ ಪಂಜದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ದೂರು ನೀಡಲಾಗಿದೆ.
ಹಿಂದೂ ಸಮಾಜದ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದ್ದು, ಹಿಂದು ಜಾಗರಣ ವೇದಿಕೆ ಮುಖಂಡರು ಬುಧವಾರ ಬೆಳ್ಳಾರೆ ಠಾಣೆಯಲ್ಲಿ ಮತ್ತು ಮಂಗಳೂರು ಅರಣ್ಯ ಅಧಿಕಾರಿ ಆಂಟನಿ ಮರಿಯಪ್ಪ ಇವರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಪ್ರತಿಭಟನೆ ನಡೆಸುವುದಾಗಿ ಹಿಂಜಾವೇ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಅರಣ್ಯಾಧಿಕಾರಿ ಸಂಜೀವ ಪೂಜಾರಿ ಈ ಹಿಂದೆಯೂ ಹಿಂದು ನಿಂದನೆ ಕಾರಣಕ್ಕೆ ಸೇವೆಯಿಂದ ಅಮಾನತುಗೊಂಡಿದ್ದರು.