ಬೆಂಗಳೂರಲ್ಲಿ ದೇಶದ ಅತಿದೊಡ್ಡ ವೃತ್ತರೈಲು ಸಂಪರ್ಕಜಾಲ
ಬೆಂಗಳೂರು: ದೇವನಹಳ್ಳಿ ಮೆಗಾ ರೈಲ್ವೆ ಟರ್ಮಿನಲ್‌ನಿಂದ ಬೆಂಗಳೂರಿನ ಪ್ರಮುಖ ರೈಲ್ವೆ ನಿಲ್ದಾಣಗಳ ದಟ್ಟಣೆ ಕಡಿಮೆ ಆಗಲಿದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದ್ದಾರೆ
ದೇವನಹಳ್ಳಿಯಲ್ಲಿ 2,500 ಕೋಟಿ ರೂಪಾಯಿ ವೆಚ್ಚದ ನೂತನ ಮೆಗಾ ರೈಲ್ವೆ ಟರ್ಮಿನಲ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ನಮ್ಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ದೇವನಹಳ್ಳಿಯಲ್ಲಿ 2,500 ಕೋಟಿ ರೂಪಾಯಿ ವೆಚ್ಚದ ನೂತನ ಮೆಗಾ ರೈಲ್ವೆ ಟರ್ಮಿನಲ್ ನಿರ್ಮಿಸಲು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಇದು ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರಮುಖ ಪಟ್ಟಣಗಳನ್ನು ಸಂಪರ್ಕಿಸುವ ದೇಶದ ಅತಿದೊಡ್ಡ ವೃತ್ತರೈಲು ಸಂಪರ್ಕಜಾಲದ ( circular railway) ಭಾಗವಾಗಲಿದೆ. ದೇವನಹಳ್ಳಿ ಮೆಗಾ ರೈಲ್ವೆ ಟರ್ಮಿನಲ್ ನಿಂದ ಬೆಂಗಳೂರಿನ ಪ್ರಮುಖ ರೈಲ್ವೆ ನಿಲ್ದಾಣಗಳ ದಟ್ಟಣೆ ಕಡಿಮೆ ಆಗುವುದರ ಜೊತೆಗೆ ದೇವನಹಳ್ಳಿ ಸುತ್ತಮುತ್ತಲಿನ ಭಾಗದ ಅಭಿವೃದ್ಧಿಗೆ ಇನ್ನಷ್ಟು ವೇಗ ದೊರೆಯಲಿದೆ ಎಂದಿದ್ದಾರೆ.