ಬೆಂಗಳೂರಿನಂತೆ ತುಮಕೂರು ಜಿಲ್ಲೆ ಅಭಿವೃದ್ಧಿ
ತುಮಕೂರು: ಬೆಂಗಳೂರಿನಂತೆ ತುಮಕೂರು ಜಿಲ್ಲೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 658 ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳೊಂದಿಗೆ ನೇರವೇರಿಸಿ, ಮಾತನಾಡಿರುವ ಅವರು ಬೆಂಗಳೂರಿನಂತೆ ತುಮಕೂರು ಜಿಲ್ಲೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 658 ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದ್ದೇವೆ. ಈ ಭಾಗದಲ್ಲಿ ಹೆಚ್ಚು ಉದ್ಯೋಗ ಸೃಷ್ಠಿಸುವುದು ನಮ್ಮ ಸಂಕಲ್ಪವಾಗಿದೆ. ನಮ್ಮ ಗ್ಯಾರಂಟಿಗಳು ರಾಜ್ಯದ ಜನರ ಮನಗೆದ್ದಿದ್ದು, ಅವರ ಆರ್ಥಿಕ ಹೊರೆಯನ್ನು ಇಳಿಸಿದೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ನೀಡುತ್ತಿರುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದೇ ನಮ್ಮ ಗುರಿ ಎಂದರು.