ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೆಂಗಳೂರಿನಿಂದ ಮಂಗಳೂರಿಗೆ ‘ವಂದೇ ಭಾರತ್’

10:50 PM Nov 08, 2023 IST | Samyukta Karnataka

ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಿಂದ -ಕರಾವಳಿಗೆ "ವಂದೇ ಭಾರತ್" ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಂಸದರು, ಮಂಗಳೂರು - ಮಡಗಾಂವ್ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು - ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು’ ಎಂದಿದ್ದಾರೆ.
ಕಾಸರಗೋಡು ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯಕೇಳಿಬಂದಿತ್ತು. ಅಲ್ಲದೇ ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು. ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜೊತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಇಡೇರುವ ಲಕ್ಷಣ ಗೋಚರಿಸುತ್ತಿದೆ.

Next Article