ಬೆಂಗಳೂರಿನ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ
11:26 AM May 23, 2024 IST
|
Samyukta Karnataka
ಬೆಂಗಳೂರ: ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಬಳಿಯ ಸ್ಟಾರ್ ಹೋಟೆಲ್ಗೆ ಬೆದರಿಕೆ ಸಂದೇಶ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಇದೊಂದು ಹುಸಿಬಾಂಬ್ ಬೆದರಿಕೆ ಅನ್ನೋದು ಬಯಲಾಗಿದೆ.
Next Article