ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಗೂಂಡಾಗಳ ಬಂಧನಕ್ಕೆ ಈಶ್ವರಪ್ಪ ಆಗ್ರಹ
ಬೆಳಗಾವಿ: ನೈತಿಕ ಪೊಲೀಸ್ ಗಿರಿಯಲ್ಲಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಸೋದರ-ಸೋದರಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಈ ಘಟನೆ ಬಗ್ಗೆ ತಕ್ಷಣ ಸಿಎಂ, ಗೃಹ ಸಚಿವರು ಗಮನ ಹರಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಯುವಕನಿಗೆ ಹೊಡೆದಿರುವ ವಿಡಿಯೊ ನೋಡಿದ್ದೇನೆ. ಮುಸ್ಲಿಂ ಗೂಂಡಾಗಳನ್ನು ತಕ್ಷಣ ಬಂಧಿಸಬೇಕು. ಹಲ್ಲೆಗೊಳಗಾದವರಿಗೆ ಸರ್ಕಾರ ಸೂಕ್ತ ಸೌಲಭ್ಯ ಮತ್ತು ಪರಿಹಾರ ನೀಡಬೇಕು, ರಾಜ್ಯದಲ್ಲಿ ಮುಸ್ಲಿಂ ಗೂಂಡಾಗಳು ಹಲ್ಲೆ ಮಾಡುತ್ತಿದ್ದಾರೆ. ನಿತ್ಯ ಇಂಥ ಘಟನೆ ನಡೆಯುತ್ತಲೇ ಇವೆ. ಈ ಬಗ್ಗೆ ತನಿಖೆ ಕೈಗೊಳ್ಳಲು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಬೆಳಗಾವಿಗೆ ತನಿಖಾ ದಳ ಕಳುಹಿಸಬೇಕು, ಹಲ್ಲೆಗೊಳಗಾದ ಯುವಕನಿಗೆ ₹2.5 ಲಕ್ಷ ಪರಿಹಾರ ನೀಡುವುದಾಗಿ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇಬ್ಬರಿಗೂ ಸರ್ಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು' ಎಂದು ಆಗ್ರಹಿಸಿದರು.