For the best experience, open
https://m.samyuktakarnataka.in
on your mobile browser.

ಬೆಳಗಾವಿಯ ರಾಜಶೇಖರ ತಳವಾರ ಅವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

11:10 PM Oct 16, 2024 IST | Samyukta Karnataka
ಬೆಳಗಾವಿಯ ರಾಜಶೇಖರ ತಳವಾರ ಅವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಬೆಂಗಳೂರು : 2024 ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳೆಗರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ.

ಬೆಳಗಾವಿ ವಿಭಾಗದಲ್ಲಿ ಬೆಳಗಾವಿಯ ಗಾಂಧಿನಗರದ ಶ್ರ ರಾಜಶೇಖರ ತಳವಾರ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಳಗಾವಿಯ ಗಾಂಧಿನಗರದವರಾದ ರಾಜಶೇಖರ್ ಅವರು ಗುಡ್ಡಗಾಡು ಪ್ರದೇಶಗಳಲ್ಲಿರುವ ಬುಡಕಟ್ಟು ಸಮುದಾಯದ ಜನರಿಗೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಬುಡಕಟ್ಟು ಸಮುದಾಯವು ವಾಸಿಸುವ ಮೂಲಭೂತ ಸೌಕರ್ಯಗಳಿಲ್ಲದ ಗುಡ್ಡಗಾಡು ಪ್ರದೇಶಗಳ ಬಗ್ಗೆ ವಿವಿಧ ಇಲಾಖೆಗಳ ಗಮನಕ್ಕೆ ತಂದು ಆ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ದೊರಕುವಂತೆ ಹಾಗೂ ಬುಡಕಟ್ಟು ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ. ಶಿಕ್ಷಣ ಕುರಿತು ಜಾಗೃತಿ ಮೂಡಿಸುವುದು, ಶಿಕ್ಷಣಕ್ಕೆ ಸಂಬಂಧಿಸಿದ ಸಮ್ಮೇಳನಗಳು, ಶಿಬಿರ, ತರಬೇತಿಗಳನ್ನು ಆಯೋಜಿಸುವುದು. ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ ಮುಂದುರೆಯಲು ಸರ್ಕಾರದ ನೆರವು ದೊರಕಿಸುವುದು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಸಮಾಜದ ಒಳಿತಿಗಾಗಿ ಸಲ್ಲಿಸಿರುವ ಸಮಾಜ ಸೇವೆಯನ್ನು ಗುರುತಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.