For the best experience, open
https://m.samyuktakarnataka.in
on your mobile browser.

ಬೆಳಗಾವಿವರೆಗೆ ವಂದೇ ಭಾರತ್ ರೈಲು ಸೇವೆ ವಿಸ್ತರಸಲು ಶೆಟ್ಟರ್ ಮನವಿ

11:30 AM Sep 19, 2024 IST | Samyukta Karnataka
ಬೆಳಗಾವಿವರೆಗೆ ವಂದೇ ಭಾರತ್ ರೈಲು ಸೇವೆ ವಿಸ್ತರಸಲು ಶೆಟ್ಟರ್ ಮನವಿ

ನವದೆಹಲಿ: ಬೆಂಗಳೂರು - ಧಾರವಾಡ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ರೈಲು ಸಂಚಾರವನ್ನು ಬೆಳಗಾವಿ ನಗರದವರೆಗೆ ವಿಸ್ತರಿಸುವ ಅಗತ್ಯತೆಯ ಬಗ್ಗೆ ಚರ್ಚಿಸಲಾಯಿತು ಎಂದು ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ, ಬೆಂಗಳೂರು - ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ್ ಹೈ ಸ್ಪೀಡ್ ರೈಲು ಸಂಚಾರವನ್ನು ಬೆಳಗಾವಿ ನಗರದವರೆಗೆ ವಿಸ್ತರಿಸುವ ಅಗತ್ಯತೆಯ ಬಗ್ಗೆ ಚರ್ಚಿಸಲಾಯಿತು.

ಭೇಟಿಯ ಪ್ರಾರಂಭದಲ್ಲಿ ಪೂಣೆ - ಬೆಳಗಾವಿ - ಹುಬ್ಬಳ್ಳಿ ನಡುವೆ ಇತ್ತೀಚಿಗೆ ವಂದೇ ಭಾರತ್ ನೂತನ ಹೈ ಸ್ಪೀಡ್ ರೈಲು ಸಂಚಾರಕ್ಕೆ ಚಾಲನೆ ನೀಡಿ, ಬೆಳಗಾವಿ ಜಿಲ್ಲೆಯ ರಹವಾಸಿಗಳ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಿ, ಅನುಕೂಲತೆ ಕಲ್ಪಿಸಿ ಕೊಟ್ಟಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು.

ತದನಂತರ ಇದೇ ಸಮಯದಲ್ಲಿ ಬೆಂಗಳೂರು - ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ್ ರೈಲು ಸಂಚಾರ ಸೇವೆಯನ್ನು ಸಹ ಬೆಳಗಾವಿಯವರೆಗೆ ವಿಸ್ತರಿಸುವ ಅವಶ್ಯಕತೆಯ ಕುರಿತು ಮನವರಿಕೆಯನ್ನು ಕೇಂದ್ರ ರೈಲ್ವೆ ಸಚಿವರಲ್ಲಿ ಮಾಡಿ ಕೊಡುವುದರೊಂದಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ನೂತನ ರೈಲು ಸೇವೆ ಕಲ್ಪಿಸುವ ಬಗ್ಗೆ ಅಗತ್ಯವೆನಿಸುವ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವ ಬಗ್ಗೆಯೂ ಸಹ ಇಬ್ಬರೂ ಸಚಿವರಲ್ಲಿ ವಿನಂತಿಸಿದ್ದು, ಅದರಂತೆ ಬರುವ ದಿನಗಳಲ್ಲಿ ಈ ಬೇಡಿಕೆಗಳನ್ನು ಸಹ ಈಡೇರಿಸುವುದಾಗಿ ಅವರು ಭರವಸೆ ನೀಡಿದರು ಎಂದಿದ್ದಾರೆ.

Tags :