For the best experience, open
https://m.samyuktakarnataka.in
on your mobile browser.

ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕನ್ನಡಿಗರ ಪಾಲಿಗೂ ಮಹತ್ವ

07:46 AM Dec 22, 2024 IST | Samyukta Karnataka
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕನ್ನಡಿಗರ ಪಾಲಿಗೂ ಮಹತ್ವ

ಕರ್ನಾಟಕ ಏಕೀಕರಣದ ಮೊದಲ ಧ್ವನಿ ಬಲವಾಗಿ ಪ್ರತಿಪಾದಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕನ್ನಡಿಗರ ಪಾಲಿಗೂ ಮಹತ್ವದ್ದಾಗಿದೆ

ಬೆಂಗಳೂರು: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶತಮಾನೋತ್ಸವ ಆಚರಣೆ ಸಂಬಂಧವಾಗಿ ರಚಿಸಲಾಗಿರುವ ಸಚಿವರು ಹಾಗೂ ಸಂಸತ್‌ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿಗಳು ಕೈಗೊಂಡ ಸಿದ್ಧತೆಗಳ ಪರಿಶೀಲನಾ ಸಭೆಯಲ್ಲಿ  ಮಾತನಾಡಿ ಬೆಳಗಾವಿಯಲ್ಲಿ ಎರಡು ದಿನಗಳ ಸಮಾರಂಭದ ಮೂಲಕ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಪ್ರಥಮ ದಿನ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದ್ದು, 27ರಂದು ಸಾರ್ವಜನಿಕ ಸಮಾರಂಭ ನಡೆಯಲಿದೆ.

ಶತಮಾನೋತ್ಸವ ಸಮಾರಂಭಕ್ಕೆ ರಾಷ್ಟ್ರದೆಲ್ಲೆಡೆಯಿಂದ ಆಗಮಿಸಲಿರುವ ಸಂಸದರು, ಗಣ್ಯರಿಗೆ ವಸತಿ, ಊಟೋಪಚಾರ ಸೇರಿದಂತೆ ಸೂಕ್ತ ಆತಿಥ್ಯ ವ್ಯವಸ್ಥೆ ಕಲ್ಪಿಸುವುದು ಸಂಬಂಧಿಸಿದ ಸಮಿತಿಗಳ ಕೆಲಸ.

ಡಿಸೆಂಬರ್ 27ರಂದು ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ನೆರವೇರಿಸುವ ಹಾಗೂ ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ನಿರ್ಧರಿಸಲಾಗಿದೆ.

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ "ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು" ಹಾಡನ್ನು ಪ್ರಥಮ ಬಾರಿಗೆ ಗಂಗೂಬಾಯಿ ಹಾನಗಲ್ ಅವರು ಹಾಡಿದ್ದರು. ಈಗ ಅದಕ್ಕೂ ನೂರು ವರ್ಷಗಳು ಸಂದ ಹಿನ್ನೆಲೆಯಲ್ಲಿ ಆ ಹಾಡನ್ನು ಪುನಃ ಶತಮಾನೋತ್ಸವ ಆಚರಣೆಯಲ್ಲಿ  ಹಾಡಿಸುವ ಕುರಿತು ತೀರ್ಮಾನಿಸಲಾಯಿತು.

ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಏಕೀಕರಣದ ಮೊದಲ ಧ್ವನಿ ಬಲವಾಗಿ ಪ್ರತಿಪಾದಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕನ್ನಡಿಗರ ಪಾಲಿಗೂ ಮಹತ್ವದ್ದಾಗಿದೆ ಎಂದರು.

Tags :