For the best experience, open
https://m.samyuktakarnataka.in
on your mobile browser.

ಬೆಳಗಾವಿ : ಗಾಂಧಿ‌ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ  ಶಾಲೆಗಳಿಗೆ ರಜೆ

11:14 PM Jan 20, 2025 IST | Samyukta Karnataka
ಬೆಳಗಾವಿ   ಗಾಂಧಿ‌ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ  ಶಾಲೆಗಳಿಗೆ ರಜೆ

ಬೆಳಗಾವಿ :  ಬೆಳಗಾವಿ ಸುವರ್ಣಸೌಧದಲ್ಲಿ ಕರ್ನಾಟಕ ಸರ್ಕಾರದಿಂದ ಜ.21ರ ಬೆಳಗ್ಗೆ 10.30ಕ್ಕೆ 'ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ' ಸಮಾರಂಭ ಆಯೋಜಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷಾ ದೃಷ್ಟಿಯಿಂದ 21 ರಂದು ಬೆಳಗಾವಿ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದು, , ಈ ರಜಾ ಅವಧಿಯನ್ನು ಮುಂದಿನ ಶೈಕ್ಷಣಿಕ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Tags :