ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೆಳಗಾವಿ - ಪುಣೆ ನಡುವೆ ವಂದೇಭಾರತ್

03:41 PM Sep 10, 2024 IST | Samyukta Karnataka

ಬೆಂಗಳೂರು: ಬೆಳಗಾವಿ - ಪುಣೆ ನಡುವೆ ವಂದೇಭಾರತ್ ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 15ರಂದು ಉದ್ಘಾಟನೆಗೊಳ್ಳಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬೆಳಗಾವಿ ಜನರ ಬೇಡಿಕೆಯ ಮೇರೆಗೆ, ಬೆಳಗಾವಿ - ಪುಣೆ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹಾಗೂ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಭೇಟಿಯಾಗಿ, ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸಬೇಕು. ಬೆಂಗಳೂರು-ಧಾರವಾಡ ವಂದೇ ಭಾರತ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು.. ಈಗ ಪುಣೆ–ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್‌ ರೈಲು ಸೇವೆ ಆರಂಭವಾಗಿದೆ. ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಬೆಳಗಾವಿ - ಪುಣೆ ನಡುವೆ ವಂದೇಭಾರತ್ ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 15ರಂದು ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದೆ. ಈ ಮಹತ್ವಪೂರ್ಣ ನಿರ್ಣಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಹಸ್ರ ಸಹಸ್ರ ಧನ್ಯವಾದಗಳು ಎಂದಿದ್ದಾರೆ.

Tags :
#Belagavi#pune#VandeBharatExpress#ಬೆಳಗಾವಿ
Next Article