ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೆಳಗಾವಿ-ಮೀರಜ್ ವಿಶೇಷ ಪ್ಯಾಸೆಂಜರ್ ರೈಲು ಸೇವೆ ವಿಸ್ತರಣೆ

08:13 PM Aug 02, 2024 IST | Samyukta Karnataka

ಬೆಂಗಳೂರು: ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗಲು ರೈಲು ಸೇವೆಯನ್ನು 10 ಆಗಸ್ಟ್ ವರೆಗೆ ಮುಂದುವರೆಸಲಾಗಿದೆ ಎಂದು ರೈಲ್ವೆ ಇಲಾಖೆಯ ಸಹಾಯಕ ಸಚಿವ ವಿ. ಸೋಮಣ್ಣ ಅವರು ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಾಟದ ಸೌಕರ್ಯ ಕಲ್ಪಿಸಿಕೊಟ್ಟಿರುವ ರೈಲು ಸೇವೆಯನ್ನು 10 ಆಗಸ್ಟ್ ವರೆಗೆ ಮುಂದುವರೆಸಲಾಗಿದೆ ಎಂದಿದ್ದಾರೆ.

ವೇಳಾಪಟ್ಟಿ : ಬೆಳಗಾವಿ-ಮೀರಜ್ ರೈಲು‌ : ಪ್ರತಿದಿನ ಬೆಳಿಗ್ಗೆ 6.00 ಕ್ಕೆ ಹೊರಟು 9.00 ಕ್ಕೆ ಮೀರಜ್ ತಲುಪಲಿದೆ. ಮರಳಿ ಬೆಳಿಗ್ಗೆ 9.50 ಕ್ಕೆ ಮೀರಜ್'ನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಮೀರಜ್ ರೈಲು : ಮಧ್ಯಾಹ್ನ 1.30 ರಿಂದ ಬೆಳಗಾವಿಯಿಂದ ಹೊರಟು ಸಂಜೆ 04.30 ಕ್ಕೆ ಮೀರಜ್ ತಲುಪಲಿದೆ. ಮರಳಿ ಸಂಜೆ 05.35 ಕ್ಕೆ ಮೀರಜ್'ನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ತಲುಪಲಿದೆ.

ನಾಳೆ ಜುಲೈ 31 ರಿಂದ ಆಗಸ್ಟ್ 10ರ ವರೆಗೆ ಬೆಳಗಾವಿ-ಮೀರಜ್ ರೈಲು ದಿನಕ್ಕೆ 2 ಬಾರಿ ಓಡಾಟ ನಡೆಸಲಿದೆ. ಪ್ರಯಾಣಿಕರು ಈ ವಿಶೇಷ ರೈಲಿನ ಸದುಪಯೋಗ ಪಡೆಸಿಕೊಳ್ಳಬೇಕೆಂದು ಕೋರುತ್ತೇನೆ ಎಂದಿದ್ದಾರೆ.

Tags :
#samyuktakarnataka#ಬೆಳಗಾವಿ#ಮಿರಜ್‌#ಸಂಯುಕ್ತ ಕರ್ನಾಟಕ
Next Article