ಬೆಳೆಯುತ್ತಿರುವ ನಗರಗಳಲ್ಲಿ ನಮ್ಮ ಅವಳಿ ನಗರ ಮುಂಚೂಣಿ
ಬೆಂಗಳೂರು: ರಾಜ್ಯದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ನಮ್ಮ ಅವಳಿ ನಗರ ಮುಂಚೂಣಿಯಲ್ಲಿದೆ ಎಂಬುದು ನಮಗೂ ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು "ಸಂಘಟನ್ ಮೇ ಶಕ್ತೀ ಹೈ"
ಭಾರತೀಯ ಜನತಾ ಪಕ್ಷ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ "ಜಿಲ್ಲಾ ಕಾರ್ಯಕಾರಿಣಿ ಸಭೆ" ಯಲ್ಲಿ ಪಾಲ್ಗೊಂಡು, ಮುಂಬರುವ ಲೋಕಸಭಾ ಚುನಾವಣಾ ತಯಾರಿಯ ಕುರಿತು ಚರ್ಚಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ವ ಕ್ಷೇತ್ರದಲ್ಲೂ ಉತ್ತುಂಗಕ್ಕೆ ಏರಿದ್ದು, ಜನರ ಭರವಸೆಯನ್ನು ಈಡೇರಿಸುವಲ್ಲಿ, ದೇಶದ ಹಿತ ಕಾಯುವಲ್ಲಿ ನಮ್ಮ ಕೇಂದ್ರ ಸರಕಾರ ಯಶಸ್ವಿಯಾಗಿದ್ದು, ಜನರ ನಂಬಿಕೆಯೂ ಮೋದಿಯವರ ಮೇಲಿದೆ ಎಂಬುದು ಸ್ಪಷ್ಟವಾಗಿದೆ. ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲೂ ಅಭಿವೃದ್ಧಿ ಯೋಜನೆಗಳು ಜಿಲ್ಲೆಯ ಚಿತ್ರಣವನ್ನೇ ಬದಲಾಯಿಸಿದ್ದು, ರಾಜ್ಯದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ನಮ್ಮ ಅವಳಿ ನಗರ ಮುಂಚೂಣಿಯಲ್ಲಿದೆ ಎಂಬುದು ನಮಗೂ ಹೆಮ್ಮೆಯ ಸಂಗತಿ ಎಂದಿದ್ದಾರೆ.