ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೆಳ್ಳಂಬೆಳ್ಳಿಗ್ಗೆ ರೌಡಿಶೀಟರ್‌ ಮೇಲೆ ಪೊಲೀಸರ ಫೈರಿಂಗ್‌

10:08 AM Aug 11, 2024 IST | Samyukta Karnataka

ಮಂಡ್ಯ: ಬೆಳ್ಳಂಬೆಳಿಗ್ಗೆಯೇ ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ.  ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್‌ ಶ್ರೀಧರ್ ಫೈರಿಂಗ್‌ ಮಾಡಿದ್ದು, ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಜುಲೈ 30 ರಂದು ಕಾಂತರಾಜು ಎಂಬಾತನ ಕೊಲೆ ನಡೆದಿತ್ತು.  ಆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಪಿವೈ ಶ್ರೀಧರ್ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನ ಆರಂಭಿಸಿದ್ದರು. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು.

Next Article