ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೈಕ್ ಕಳ್ಳತನ ಪ್ರಕರಣ: ೬ ಲಕ್ಷ ಮೌಲ್ಯದ ೧೨ ಬೈಕ್ ವಶ

12:54 PM Sep 27, 2024 IST | Samyukta Karnataka

ಇಬ್ಬರು ಮಹಿಳೆಯರು ಸೇರಿ ಐವರ ಬಂಧನ

ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರನ್ನು ಬಂಧಿಸಿದ್ದು, ೬ ಲಕ್ಷ‌ ಮೌಲ್ಯದ 12 ವಿವಿಧ ಕಂಪನಿಯ ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕುಮಾರ್ ತಿಳಿಸಿದರು.
ಶುಕ್ರವಾರ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಪ್ರಮುಖ ಆರೋಪಿತರಾದ ಕೇಶ್ವಾಪೂರದ ರೇಷ್ಮಾ ಗುಡಗೇರಿ, ಗದಗಿನ ಆಸ್ಮಾಬಾನು ಬಾಗವಾನ್ ಉರ್ಪ್ ಮುಲ್ಲಾ, ರಾಮನಗರದ ರವಿ ಉರ್ಪ್ ನೀಲೆಶ್ ಬಣಸೋಡೆ, ಗದಗಿನ ಮುಬಾರಕ್ ಬಾಗವಾನ್, ಹುಬ್ಬಳ್ಳಿ ಕೆಕೆ ನಗರದ ದಸ್ತಗೀರ್ ಧಾರವಾಡ ಎಂಬವರನ್ನು ಬಂಧಿಸಲಾಗಿದೆ.
ಆರೋಪಿಗಳ ವಿರುದ್ಧ ಜಿಲ್ಲೆಯಲ್ಲದೇ ವಿವಿಧ ಜಿಲ್ಲೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದ್ದು, ಸದ್ಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 7 ಕೇಶ್ವಾಪೂರ ಠಾಣೆಯಲ್ಲಿ 3, ಹುಬ್ಬಳ್ಳಿ ಉಪನಗರ ಹಾಗೂ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.
ಆರೋಪಿತರಿಂದ ಸುಮಾರು 6 ಲಕ್ಷ ರೂ ಮೌಲ್ಯದ 10 ವಿವಿಧ ಕಂಪನಿಯ ಸ್ಕೂಟಿಗಳು ಹಾಗೂ 2 ಬೈಕ್ ವಶಪಡಿಸಿಕೊಳ್ಳಲಾಗಿದೆ. ನಗರದಲ್ಲಿ ದಾಖಲಾದ ಪ್ರಕರಣಗಳನ್ನು ಪತ್ತೆ ಮಾಡುವ ಸಂದರ್ಭದಲ್ಲಿ ಸಿಸಿ ಟಿವಿ ಕ್ಯಾಮರಾ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಮಹಿಳೆಯರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಮಹಿಳೆಯ ಮೂಲಕ ಆರೋಪಿತರು ಬೈಕ್ ಕಳ್ಳತನ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿಸಿಪಿ ಮಹಾನಿಂಗ ನಂದಗಾವಿ, ಎಸಿಪಿ ಶಿವಪ್ರಕಾಶ್ ನಾಯಕ್, ವಿದ್ಯಾನಗರ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಜಯಂತ ಗೌಳಿ, ಪಿಎಸ್ಐ ಶ್ರೀಮಂತ ಹುಣಸಿಕಟ್ಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಇದ್ದರು.

Tags :
#hubli#ಅಪರಾಧ#ಹುಬ್ಬಳ್ಳಿ
Next Article