For the best experience, open
https://m.samyuktakarnataka.in
on your mobile browser.

ಬೈಕ್​, ಬಸ್ ನಡುವೆ ಭೀಕರ ಅಪಘಾತ: ಹೊತ್ತಿ ಉರಿದ ಬಸ್

07:18 PM Apr 23, 2024 IST | Samyukta Karnataka
ಬೈಕ್​  ಬಸ್ ನಡುವೆ ಭೀಕರ ಅಪಘಾತ  ಹೊತ್ತಿ ಉರಿದ ಬಸ್

ಹಾಸನ: ಬೈಕ್ ಹಾಗೂ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು. ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು. ಅಪಘಾತ ರಭಸಕ್ಕೆ ಬಸ್‌ಗೆ ಬೆಂಕಿ ಹೊತ್ತಿಕೊಂಡು ಬಸ್ ಸುಟ್ಟು ಕರಕಲಾಗಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಕೆ‌ಎಸ್‌ಆರ್‌ಟಿಸಿ ಬಸ್​ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಚಾಲಕ ರಸ್ತೆಯಲ್ಲೇ ಬಸ್ ನಿಲ್ಲಿಸಿದ್ದು, ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಕೆ‌ಎಸ್‌ಆರ್‌ಟಿಸಿ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.