ಬೋಯಿಂಗ್ ಸುಕನ್ಯಾ ಯೋಜನೆ ಲೋಕಾರ್ಪಣೆಗೊಳಿಸಿದ ಮೋದಿ
03:54 PM Jan 19, 2024 IST | Samyukta Karnataka
ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (BIETC) ಕ್ಯಾಂಪಸ್ನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದೆ. 43 ಎಕರೆ ಪ್ರದೇಶದಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ಈ ವೇಳೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು, ದೇಶದ ಹೆಣ್ಣುಮಕ್ಕಳನ್ನು ಏವಿಯೇಷನ್ ಸೆಕ್ಟರ್ನತ್ತ ಆಕರ್ಷಿಸುವ ಮತ್ತು ಮಹಿಳೆಯರಿಗೆ ತರಬೇತಿ ನೀಡಲು ಉತ್ತೇಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಉಪಸ್ಥಿತರಿದ್ದರು.