ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭಾನುವಾರದಂದು ಬದಲಾದ ಸಮಯದಲ್ಲಿ ನಮ್ಮ ಮೆಟ್ರೋ

11:14 AM Jun 14, 2024 IST | Samyukta Karnataka

ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ

ಬೆಂಗಳೂರು: ಭಾನುವಾರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಜೂನ 16 ರಂದು ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ನಮ್ಮ ಮೆಟ್ರೋ​ ತಿಳಿಸಿದೆ.
ದಿನಾಂಕ 16.06.2024 ಭಾನುವಾರದಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (UPSC Preliminary Exams, 2024) ನಡೆಯಲಿರುವುದರಿಂದ, ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 07.00 ಗಂಟೆಗೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಕೋರಲಾಗಿದೆ.

Next Article