ಭಾರತದಲ್ಲಿ ಮಾತ್ರ ಪಜಾಪಭುತ್ವ ಉಳಿದಿದೆ
ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗುಳಿಯಲು ಡಾ.ಅಂಬೇಡ್ಕರ್ ಅವರು ಕೊಟ್ಡಿರುವ ಸಂವಿಧಾನ ಕಾರಣ
ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ನಮಗೆಲ್ಲ ಮಾರ್ಗದರ್ಶನ ಮಾಡುತ್ತಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ. ಅಷ್ಟೇ ಅಲ್ಲ ನಮ್ಮ ದೇಶದೊಂದಿಗೆ 19 ದೇಶಗಳು ಸ್ವಾತಂತ್ರ್ಯವಾಗಿದ್ದವು. ಅಲ್ಲಿ ಎಲ್ಲಿಯೂ ಪ್ರಜಾಪ್ರಭುತ್ವ ಉಳಿದಿಲ್ಲ. ಆದರೆ, ಭಾರತದಲ್ಲಿ ಮಾತ್ರ ಪಜಾಪಭುತ್ವ ಉಳಿದಿದೆ. ಇದಕ್ಕೆ ಭಾರತೀಯರು ಪ್ರಜಾಪ್ರಭುತ್ತದ ಮೇಲೆ ಇಟ್ಟಿರುವ ನಂಬಿಕೆ ಕಾರಣ ಎಂದು ಹೇಳಿದರು.