ಭಾರತದ ಸರ್ವೋಚ್ಚ ನ್ಯಾಯಾಲಯ 75 ವರ್ಷಗಳ ಸ್ಮರಣಾರ್ಥ ಅಂಚೆಚೀಟಿ, ನಾಣ್ಯ ಬಿಡುಗಡೆ
12:11 PM Aug 31, 2024 IST | Samyukta Karnataka
ನವದೆಹಲಿ: 2 ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಉದ್ಘಾಟಿಸಿದರು.
ಬಳಿಕ ಭಾರತದ ಸರ್ವೋಚ್ಚ ನ್ಯಾಯಾಲಯದ ಸ್ಥಾಪನೆಯಾಗಿ 75 ವರ್ಷಗಳ ಸ್ಮರಣಾರ್ಥವಾಗಿ ಅಂಚೆಚೀಟಿ ಮತ್ತು ನಾಣ್ಯವನ್ನು ಅನಾವರಣಗೊಳಿಸಿದರು. ಸುಪ್ರೀಂ ಕೋರ್ಟ್ ಆಯೋಜಿಸಿರುವ ಎರಡು ದಿನಗಳ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜಿಲ್ಲಾ ನ್ಯಾಯಾಂಗದಿಂದ 800 ಕ್ಕೂ ಹೆಚ್ಚು ನ್ಯಾಯಧೀಶರು ಭಾಗವಹಿಸಲಿದ್ದಾರೆ.