ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭಾರತೀಯ ಸನಾತನ ಸಂಸ್ಕೃತಿ, ಪರಂಪರೆ ರಕ್ಷಣೆಗೆ ಮನವಿ

07:57 PM Oct 30, 2024 IST | Samyukta Karnataka

ಬೆಂಗಳೂರು: ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿಮಠದ ಮುಂಬೈ ಮಹಾನಗರ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿಗಳು, ಕರ್ನಾಟಕದ ಪ್ರತಿಷ್ಠಿತ ರಾಜೋತ್ಸವ ಪ್ರಶಸ್ತಿ ಪುರಸ್ಕೃತರೂ ಆದ ಹಿರಿಯ ಪಂಡಿತ ಮಾಹುಲಿ ವಿದ್ಯಾಸಿಂಹಾಚಾರ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮಂಗಳವಾರ ಭೇಟಿ ಮಾಡಿದರು.
ದೇಶದ ದೇವಾಲಯಗಳು ಸರಕಾರದ ಅಧೀನದಲ್ಲಿ ಇರುವ ಅಗತ್ಯ ಇಲ್ಲ. ಹಾಗಾಗಿ ದೇವಾಲಯಗಳನ್ನು ಸರಕಾರದ ಸುಪರ್ದಿಯಿಂದ ಹೊರಗಿಡಬೇಕು. ಭಾರತೀಯ ಸನಾತನ ಸಂಸ್ಕೃತಿಯ ಬಗ್ಗೆ ನಮ್ಮ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡುವ ನಿಟ್ಟಿನಲ್ಲಿ ಪಠ್ಯಕ್ರಮ ಅಳವಡಿಸುವಂತಾಗಬೇಕು ಎಂದು ಆಚಾರ್ಯರು ಮನವಿ ಮಾಡಿದರು.

ನ್ಯಾಯಾಂಗ ವ್ಯವಸ್ಥೆ ಬಲಯುತವಾಗಲಿ:
ಹಿಂದೂಗಳ ರಕ್ಷಣೆಯ ವಿಷಯದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲಯುತವಾಬೇಕು ಹಾಗೂ ಈ ನಿಟ್ಟಿನಲ್ಲಿ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕು. ದೇಶದ ಏಕತೆಗೆ ಮಾರಕವಾದ ವಿಚಾರ ಧಾರೆಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವಂತಾಬಾರದು ಎಂದು ಆಚಾರ್ಯರು ರಾಷ್ಟ್ರಪತಿಗಳಿಗೆ ತಿಳಿಸಿದರು.
ಭಾರತೀಯ ಸನಾತನ ಸಂಸ್ಕೃತಿ ಮತ್ತು ಹಿಂದುತ್ವದ ಬಗ್ಗೆ ಅಪಾರ ಗೌರವ ಹೊಂದಿದ ಮಾಹುಲಿ ಆಚಾರ್ಯರು ರಾಷ್ಟ್ರಪತಿಗಳೊಂದಿಗೆ ನಡೆದ ಭೇಟಿಯಲ್ಲಿ ಈ ವಿಷಯಗಳನ್ನು ಕುರಿತು ತಮ್ಮ ಅಭಿಪ್ರಾಯ, ನಿಲುವುಗಳನ್ನು ವ್ಯಕ್ತಪಡಿಸಿದರು.

ಮೋದಿ ಗಮನಕ್ಕೆ ತರುವೆ:
ಎಲ್ಲ ವಿಚಾರಗಳನ್ನೂ ಆಲಿಸಿದ ರಾಷ್ಟ್ರಪತಿಗಳು ಮುಂದಿನ ಕ್ರಮಕ್ಕಾಗಿ ಈ ವಿಷಯವನ್ನು ಪ್ರಧಾನಿ ಮೋದಿ ಅವರ ಗಮನಕ್ಕೆ ತರುವುದಾಗಿ ತಿಳಿಸಿದರು.

ಇದೇ ಮೊದಲು:
ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ ಪರಂಪರೆಯ ಹಿರಿಯ ವಿದ್ವಾಂಸರೊಂದಿಗೆ ರಾಷ್ಟ್ರಪತಿ ಮುರ್ಮು ಅವರು ಸವಿವರವಾಗಿ ಚರ್ಚಿಸಿ ಮಾತುಕತೆ ನಡೆಸಿದ್ದು ಇದೇ ಪ್ರಪ್ರಥಮ ಎಂದು ದಾಖಲಾಗಿದೆ.

Next Article