Champions Trophy 2025: ಭಾರತ ತಂಡ ಪ್ರಕಟ
ಚಾಂಪಿಯನ್ಸ್ ಟ್ರೋಫಿಯಲ್ಲಿ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.
ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪ್ರಕಟಗೊಂಡಿದೆ.
ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ಮುಂಬೈನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಸರಣಿಗಾಗಿ ಹದಿನೈದು ಆಟಗಾರರ ಬಲಿಷ್ಠ ತಂಡವನ್ನು ಪ್ರಕಟಿಸಿದ್ದಾರೆ.
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಷಬ್ ಪಂತ್, ಕೆಎಲ್ ರಾಹುಲ್, ಕುಲ್ದೀಪ್ ಯಾದವ್ ಸೇರಿ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ, ಈ ಮಹತ್ವದ ಸರಣಿಯಲ್ಲಿ ಭಾರತ ಸೇರಿ ಒಟ್ಟು 8 ತಂಡಗಳು ಭಾಗಿಯಾಗುತ್ತಿದ್ದು, ಪಾಕಿಸ್ತಾನ ಹೊರತು ಪಡಿಸಿ ಎಲ್ಲಾ ತಂಡಗಳು ಪ್ರಕಟಗೊಂಡಿವೆ. ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಪ್ರಾರಂಭವಾಗಲಿದೆ. ಪಾಕಿಸ್ತಾನ ಆತಿಥ್ಯ ವಹಿಸಿಕೊಂಡಿರುವ ಈ ಟೂರ್ನಿಯಲ್ಲಿ ಭಾರತ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಗಳನ್ನು ಆಡಲಿದೆ.
ಭಾರತ ಆಡುವ ಪಂದ್ಯಗಳು ದುಬೈನಲ್ಲಿ ನಡೆಯಲಿದ್ದು ಪಂದ್ಯಗಳ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಭಾರತ ತನ್ನ ಮೊದಲ ಪಂದ್ಯ ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.