ಭೀಕರ ಅಪಘಾತ ಇಬ್ಬರ ಸಾವು
04:47 PM Jan 06, 2024 IST
|
Samyukta Karnataka
ಬೆಳಗಾವಿ: ಕಬ್ಬಿನ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಲೋಳಸೂರ ಗ್ರಾಮದ ಹತ್ತಿರ ನಡೆದಿದೆ.
ಬೈಕ್ ಸವಾರರು ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದಿಂದ ಆಗಮಿಸುತ್ತಿದ್ದರು. ಇದೇ ವೇಳೆ ಟ್ರಾಕ್ಟರ್ ಪಲ್ಟಿಯಾಗಿದ್ದು, ಬೈಕ್ ಸವಾರರಿಬ್ಬರು ಟ್ರಾಕ್ಟರ್ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತರ ಕುರಿತು ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
Next Article