For the best experience, open
https://m.samyuktakarnataka.in
on your mobile browser.

ಭ್ರಷ್ಟಾಚಾರ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿಗೆ 14 ವರ್ಷ ಜೈಲು ಶಿಕ್ಷೆ

01:29 PM Jan 17, 2025 IST | Samyukta Karnataka
ಭ್ರಷ್ಟಾಚಾರ ಪ್ರಕರಣ  ಪಾಕಿಸ್ತಾನ ಮಾಜಿ ಪ್ರಧಾನಿಗೆ 14 ವರ್ಷ ಜೈಲು ಶಿಕ್ಷೆ

ಇಮ್ರಾನ್ ಖಾನ್‌ಗೆ 14 ವರ್ಷ ಜೈಲು ಶಿಕ್ಷೆಯನ್ನು ಹಾಗೂ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ 7 ವರ್ಷ ಜೈಲು ಶಿಕ್ಷೆ

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​ ಖಾನ್‌ಗೆ​ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್‌ನಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದಡಿ ಇಮ್ರಾನ್ ಖಾನ್‌ಗೆ 14 ವರ್ಷ ಜೈಲು ಶಿಕ್ಷೆಯನ್ನು ಹಾಗೂ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇದರೊಂದಿಗೆ ಇಮ್ರಾನ್ ಖಾನ್‌ಗೆ 10 ಲಕ್ಷ ಪಾಕಿಸ್ತಾನಿ ರೂಪಾಯಿ ಮತ್ತು ಬುಶ್ರಾ ಬೀಬಿಗೆ 5 ಲಕ್ಷ ಪಾಕಿಸ್ತಾನಿ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಎಲ್ಲಾದರೂ ದಂಡ ಪಾವತಿಸಲು ಸಾಧ್ಯವಾಗದೆ ಇದ್ದರೆ ಇಮ್ರಾನ್ ಖಾನ್ 6 ತಿಂಗಳು, ಬುಶ್ರಾ ಬೇಬಿ ಅವರು 3 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಇಮ್ರಾನ್​ ಖಾನ್​ ಅವರನ್ನು 2023ರ ಮೇ 9ರಂದು ಬಂಧಿಸಲಾಗಿತ್ತು.

Tags :