ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಂಗನ ಕಾಯಿಲೆಗೆ ಮತ್ತೆರಡು ಬಲಿ

09:46 PM Mar 04, 2024 IST | Samyukta Karnataka

ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆ ವ್ಯಾಪಿಸತೊಡಗಿದ್ದು, ಸೋಮವಾರ ಈ ಕಾಯಿಲೆ ಮತ್ತೆರಡು ಜನರನ್ನು ಬಲಿ ತೆಗೆದುಕೊಂಡಿದೆ. ಕಲ್ಲೂರು, ಹೆಗ್ಗೆಕೊಪ್ಪ ಭಾಗದ ಇಬ್ಬರು ವೃದ್ಧರು ಮೃತಪಟ್ಟಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ವರೆಗೆ ತಾಲೂಕಿನಲ್ಲಿ ಒಟ್ಟು ಬರೋಬ್ಬರಿ ಐವತ್ತು ಜನರಲ್ಲಿ ಈ ಕಾಯಿಲೆ ಕಂಡು ಬಂದಿದ್ದು, ಸೋಮವಾರ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟ ಇಬ್ಬರು ಸೇರಿ ಒಟ್ಟೂ ನಾಲ್ವರು ಈ ಕಾಯಿಲೆಯಿಂದ ಮೃತಪಟ್ಟಂತಾಗಿದೆ.
ಇದೀಗ ತಾಲೂಕಿನಲ್ಲಿ ಬಿರು ಬೇಸಿಗೆಯ ವಾತಾವರಣವಿದ್ದು, ಮಂಗನ ಕಾಯಿಲೆ ಹರಡಲು ಇದು ಪೂರಕವೆನ್ನಲಾಗಿದೆ. ಆರೋಗ್ಯ ಇಲಾಖೆ ಈ ಕಾಯಿಲೆ ಕುರಿತು ಮತ್ತಷ್ಟು ಜಾಗೃತಿ ಮೂಡಿಸುವ ಅಗತ್ಯತೆ ಕಂಡುಬರುತ್ತಿರುವುದಾಗಿ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Next Article