For the best experience, open
https://m.samyuktakarnataka.in
on your mobile browser.

ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ

08:19 PM Jul 15, 2024 IST | Samyukta Karnataka
ಮಂಗಳವಾರ ಶಾಲೆ  ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನುದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ.

ಉಡುಪಿ ಶಾಲೆಗಳಿಗೆ ರಜೆ ಘೋಷಣೆ: ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.