For the best experience, open
https://m.samyuktakarnataka.in
on your mobile browser.

ಮಂಗಳೂರಿಗೆ ಬಂದ ಉಪರಾಷ್ಟ್ರಪತಿ

01:57 PM Jan 07, 2025 IST | Samyukta Karnataka
ಮಂಗಳೂರಿಗೆ ಬಂದ ಉಪರಾಷ್ಟ್ರಪತಿ

ದಕ್ಷಿಣ ಕನ್ನಡ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರದರ್ಶನಕ್ಕಾಗಿ ಆರಾಮದಾಯಕ ಸರತಿಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ’ ನಿರ್ಮಾಣಗೊಂಡಿದ್ದು ತಿರುಪತಿ ಮಾದರಿಯಲ್ಲಿ ಧರ್ಮಸ್ಥಳದಲ್ಲಿ ‘ಕ್ಯೂ ಸಿಸ್ಟಂ’ ಉದ್ಘಾಟನೆಗೆ ಉಪರಾಷ್ಟ್ರಪತಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಲೋಕಸಭೆಯ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಬರಮಾಡಿಕೊಂಡರು. ಶ್ರೀ ಸಾನಿಧ್ಯವು, ಧರ್ಮಸ್ಥಳಕ್ಕೆ ಬರುವ ಭಕ್ತರಿಗಾಗಿ ತಿರುಪತಿ ಮಾದರಿಯಲ್ಲಿ ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣವಾಗಿದೆ. 2,75,177 ಚದರ ಅಡಿಯಲ್ಲಿ ನಿರ್ಮಾಣಗೊಂಡಿದ್ದು, 2 ಅಂತಸ್ಥಿನ ಶ್ರೀ ಸಾನಿಧ್ಯ ಸಂಕೀರ್ಣದಲ್ಲಿ ಒಟ್ಟು 16 ವಿಶಾಲ ಭವನಗಳಿವೆ. ಏಕಕಾಲದಲ್ಲಿ 600 ಜನ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಭಕ್ತರಿಗೆ ಮಾರ್ಗದರ್ಶನ ನೀಡಲು ಡಿಜಿಟಲ್ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಪ್ರತಿ ಭವನದಲ್ಲಿಯೂ ಕ್ಯಾಂಟೀನ್, ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

Tags :