ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಂಗಳೂರಿನಲ್ಲಿ ಕೇರಳ ಉದ್ಯಮಿ ಅಪಹರಣ: 10 ಲಕ್ಷ ರೂ. ಹಣಕ್ಕೆ ಬೇಡಿಕೆ

08:28 PM Aug 08, 2024 IST | Samyukta Karnataka

ಮಂಗಳೂರು: ಮಂಗಳೂರಿಗೆ ವ್ಯವಹಾರ ನಿಮಿತ್ತ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸೀಟು ಮಾಡಿಸಿಕೊಡಲು ಕೇರಳದಿಂದ ಬಂದಿದ್ದ ಶರತ್ ಕೆಲಸ ಮುಗಿಸಿ ಬೆಂಗಳೂರಿಗೆ ತೆರಳಲು ಮಂಗಳವಾರ ರಾತ್ರಿ
ನಗರದ ಪಿವಿಎಸ್ ಬಳಿ ಬಸ್ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ವರ ತಂಡ ಶರತ್ ಅವರನ್ನು ಬಲವಂತವಾಗಿ ಕಾರಿಗೆ ಹಾಕಿ ಅಪಹರಿಸಿದ್ದಾರೆ ಎನ್ನಲಾಗಿದೆ. ಬಳಿಕ ಆತನ
ಮನೆಯವರಿಗೆ ಫೋನ್ ಮಾಡಿ 10 ಲಕ್ಷ ರೂಪಾಯಿಗಳ ಡಿಮಾಂಡ್ ಇಟ್ಟಿದ್ದಾರೆ.
10 ಲಕ್ಷ ಕೊಟ್ಟರೆ ಆತನನ್ನು ಬಿಡುಗಡೆ ಮಾಡುವುದಾಗಿ ಅವಾಜ್ ಹಾಕಿದ್ದಾರೆ. ಶರತ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಈ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲು ಮಾಡಿ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದು ತನಿಖೆ ಕೈಗೊಂಡಿದ್ದಾರೆ.
ಹಲವು ದಿನಗಳಿಂದ ಕಳ್ಳತನ ಪ್ರಕರಣಗಳು ಮಂಗಳೂರು ನಗರದಾದ್ಯಂತ ನಡೆದು ಜನರನ್ನು ಬೆಚ್ಚಿಬೀಳಿಸಿತ್ತು. ಸದ್ಯ ಈ ಕಿಡ್ನಾಪ್ ಪ್ರಕರಣ ತಲ್ಲಣ ಮೂಡಿಸಿದೆ. ಸದ್ಯ ಅಪಹರಣಕಾರರು 10 ಲಕ್ಷಕ್ಕೆ ಬೇಡಿಕೆಯಿಟ್ಟಿರುವುದು ಅಷ್ಟೇ ತಿಳಿದುಬಂದಿದೆ. ಇನ್ನೂ ಇದರ ಹಿಂದೆ ಯಾರಿದ್ದಾರೆ? ಯಾವುದು ಈ ಹೊಸ ಕಿಡ್ನಾಪ್ ಗ್ಯಾಂಗ್ ಎನ್ನುವುದು ತನಿಖೆ ಬಳಿಕವಷ್ಟೇ ತಿಳಿದುಬರಬೇಕಿದೆ.

Tags :
Kidnapmangaloreಅಪಹರಣ
Next Article