ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಂಗಳೂರು ರಥೋತ್ಸವ

11:09 PM Feb 16, 2024 IST | Samyukta Karnataka

ಮಂಗಳೂರು: ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ "ಮಂಗಳೂರು ರಥೋತ್ಸವ" ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು .
ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಿಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ, ಗಂಗಾಭಿಷೇಕ, ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು . ಯಜ್ಞಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಪಾಲ್ಗೊಂಡು ಪುನೀತರಾದರು.

Next Article